ಬೀದರ್ | ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ; ಮೂಲಸೌಕರ್ಯ ಒದಗಿಸಲು ಅಲೆಮಾರಿಗಳ ಆಗ್ರಹ

Date:

Advertisements

ಅಲೆಮಾರಿ ಸಮುದಾಯದ ವಸತಿ ವಂಚಿತ ಕುಟುಂಬಗಳಿಗೆ ನಿವೇಶನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಲೆಮಾರಿಗಳು ಆಗ್ರಹಿಸಿದ್ದಾರೆ.

ಬೀದರ್ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂಭಾಗದಲ್ಲಿ ವಿಶ್ವಕ್ರಾಂತಿ ದಿವ್ಯ ಪೀಠದ‌ ಅಧ್ಯಕ್ಷ ಓಂಪ್ರಕಾಶ್ ರೊಟ್ಪೆ ನೇತೃತ್ವದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಿ ಅಲೆಮಾರಿಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂಭಾಗ ಕೆಲ ಹೊತ್ತು ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮುಖಾಂತರ ತೆರಳಿ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬೀದರ್ ತಹಸೀಲ್ದಾರ್ ದಿಲ್ಸಾದ್ ಮೆಹತ್ ಅವರಿಗೆ ಸಲ್ಲಿಸಿದರು.

Advertisements

‘ಕಳೆದ 25 ವರ್ಷಗಳಿಂದ ನೌಬಾದ್‌ನ ಚೌಳಿ ಕಮಾನ್ ಬಳಿ ಖಾಸಗಿ ನಿವೇಶನದಲ್ಲಿ ತಾತ್ಕಾಲಿಕ ಗುಡಿಸಲಿನಲ್ಲಿ ವಾಸಿಸುವ 50ಕ್ಕೂ ಅಧಿಕ ಅಲೆಮಾರಿ, ಅರೆ ಅಲೆಮಾರಿ ಕುಟುಂಬಗಳಿಗೆ ಕನಿಷ್ಠ ಮೂಲ ಸೌಕರ್ಯದಿಂದ ವಂಚಿತರಾಗಿದ್ದೇವೆ. ಬಿಸಿಲು, ಮಳೆ, ಚಳಿ ಎನ್ನದೇ ಮಕ್ಕಳು, ವೃದ್ಧರು, ಗರ್ಭಿಣಿಯರು ನರಕಯಾತನೆ ಬದುಕು ಸಾಗಿಸುತ್ತಿದ್ದೇವೆ.‌ ಆದರೆ, ಅಲೆಮಾರಿಗಳಿಗೆ ಸೂರು, ಮೂಲಭೂತ ಸೌಕರ್ಯ ಒದಗಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ’ ಎಂದು ಅಲೆಮಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2024 10 03 at 7.10.44 PM

‘2017 ರಲ್ಲಿ ಎರಡು ಎಕರೆ ನಿವೇಶನವನ್ನು ನಗರಸಭೆಯಿಂದ ಮಂಜೂರಿಗಾಗಿ ಠರಾವು ಪಾಸು ಮಾಡಲಾಗಿತ್ತು. ಆದರೆ, ಆ ನಿವೇಶನ ಅಲೆಮಾರಿಗಳಿಗೆ ಹಸ್ತಾಂತರ ಮಾಡದೇ ಅನ್ಯ ಯೋಜನೆಗೆ ಬಳಸಿ ಮತ್ತೆ ನಮ್ಮನ್ನು ಕೊಡ್ತೀವಿ ಎನ್ನುತ್ತಾ ಭರವಸೆಯಲ್ಲೇ ಅಲೆದಾಡುವಂತೆ ಮಾಡುತ್ತಿದ್ದಾರೆ. ಇದರಿಂದ ಇಡೀ ಬದುಕು ಬೀದಿಯಲ್ಲಿ ಕಳೆಯುಂತಾಗಿದೆ’ ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಂಡು ಸಂಬಂಧಿಸಿದ ಇಲಾಖೆಗಳಿಂದ ಅಲೆಮಾರಿ ಸಮುದಾಯದ ಕುರಿತಾದ ಸಂಪೂರ್ಣ ಮಾಹಿತಿ ಪಡೆದು ಶೀಘ್ರದಲ್ಲೇ ಅಲೆಮಾರಿ, ಅರೆಅಲೆಮಾರಿ ಜನಾಂಗಕ್ಕೆ 3 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ಇಲ್ಲದಿದ್ದರೆ ಇಡೀ ಜಿಲ್ಲೆಯ ಅಲೆಮಾರಿ ಜನಾಂಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಸತ್ಯಾಗ್ರಹ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎಡಿಜಿಪಿ ಎಂ.ಚಂದ್ರಶೇಖರ್‌ ಅಮಾನತಿಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಈ ಸಂದರ್ಭದಲ್ಲಿ ವಿಶ್ವಕ್ರಾಂತಿ ದಿವ್ಯ ಪೀಠದ‌ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ, ರಿಶೈನ್‌ ಸಂಸ್ಥೆಯ ರೋಹನ್‌ ಕುಮಾರ್‌ ಸೇರಿದಂತೆ ಅಲೆಮಾರಿ ಸಮುದಾಯದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X