ಮೈಸೂರು | ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆರು ಮಂದಿ ಗಣ್ಯ ಸಾಧಕರು ಆಯ್ಕೆ

Date:

Advertisements

ಸ್ಪಂದನ ಸಾಂಸ್ಕೃತಿಕ ಪರಿಷತ್ತು ಹಾಗೂ ಅದಮ್ಯ ರಂಗಶಾಲೆ ಜಂಟಿಯಾಗಿ ಕೊಡಮಾಡುವ ‘ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ಗೆ ವಿವಿಧ ಕ್ಷೇತ್ರದ ಆರು ಮಂದಿ ಗಣ್ಯ ಸಾಧಕರು ಆಯ್ಕೆಯಾಗಿದ್ದಾರೆ ಎಂದು ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ಹಾಗೂ ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ತಿಳಿಸಿದ್ದಾರೆ.

ಸಾಹಿತಿ ಮತ್ತು ಅಂಕಣಕಾರ ಮಿರ್ಲೆ ಚಂದ್ರಶೇಖರ್ (ಸಾಹಿತ್ಯ ಕ್ಷೇತ್ರ), ವಿಜಯವಾಣಿ ದಿನಪತ್ರಿಕೆಯ ಮುಖ್ಯ ವರದಿಗಾರ ಆರ್. ಕೃಷ್ಣ (ಪತ್ರಿಕೋದ್ಯಮ ಕ್ಷೇತ್ರ), ಕನ್ನಿಕಾ ಕಾವೇರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಎಂ.ಸಿ. ಚೋಂದಮ್ಮ (ಶಿಕ್ಷಣ ಕ್ಷೇತ್ರ), ಜಿಲ್ಲಾ ಹಿರಿಯ ನಾಗರಿಕರ ಸಂಘದ ಕಾರ್ಯದರ್ಶಿ ಆರ್. ನರಸಿಂಹಮೂರ್ತಿ (ಸಮಾಜ ಸೇವಾ ಕ್ಷೇತ್ರ), ವಿಸ್ಮಯ ಪ್ರಕಾಶನದ ಮುಖ್ಯಸ್ಥ ಹಾಲತಿ ಲೋಕೇಶ್ (ಪುಸ್ತಕ ಪ್ರಕಾಶನ), ಮೈಸೂರು ತಾಲ್ಲೂಕು ಶಿಕ್ಷಕರ ಸಂಘದ ನಿರ್ದೇಶಕ ಜಿ. ಮಹೇಶ್ (ಸಂಘಟನಾ ಕ್ಷೇತ್ರ) ಅವರು ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಧಕರಾಗಿದ್ದಾರೆ.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಅ. 6ರಂದು ಸಂಜೆ 5.30 ಗಂಟೆಗೆ ನಡೆಯಲಿರುವ ಸಮಾರಂಭವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಉದ್ಘಾಟಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಲಿದ್ದಾರೆ.

Advertisements
ಮೈಸೂರು

ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಭವನದ ವಿಶ್ರಾಂತ ನಿರ್ದೇಶಕ ಡಾ.ಎಸ್. ಶಿವರಾಜಪ್ಪ ಪ್ರಶಸ್ತಿ ಪ್ರದಾನ ಮಾಡುವರು. ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ಅಭಿನಂದನಾ ಮತ್ತು ಆಶಯ ನುಡಿಗಳನ್ನಾಡಲಿದ್ದಾರೆ. ಬಳಿಕ ಖ್ಯಾತ ಕತೆಗಾರ ವಸುಧೇಂದ್ರ ಅವರ ಸಣ್ಣಕತೆಯ ಆಧಾರಿತ ‘ನಮ್ಮಮ್ಮ ಅಂದ್ರೆ ನಂಗಿಷ್ಟ’ ನಾಟಕ ಪ್ರದರ್ಶನ ನಡೆಯಲಿದೆ.

ಇದನ್ನು ಓದಿದ್ದೀರಾ? ರಾಯಚೂರು | ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ಶಾಸಕ ದದ್ದಲ್‌ಗೆ ಮನವಿ

ವಿನೋದ್ ಸಿ. ಮೈಸೂರು ಅವರು ಈ ಕತೆಯನ್ನು ರಂಗರೂಪಕ್ಕೆ ಅಳವಡಿಸಿ ನಿರ್ದೇಶನ ಮಾಡಿದ್ದಾರೆ. ನಾಟಕಕ್ಕೆ ನೂರು ರೂಪಾಯಿ ಪ್ರೋತ್ಸಾಹ ಧನವಿದೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕ ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X