ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ವಿರುದ್ದ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಹಿಂದುಳಿದ ವರ್ಗ ಸಮಾಜ ಬೆಂಬಲವಾಗಿ ಅ.5ರಂದು ಮಾನ್ವಿಯಲ್ಲಿ ಸ್ವಾಭಿಮಾನಿ ಸಮಾವೇಶ ನಡೆಯಲಿದೆ. ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಶಾಂತಪ್ಪ ಹೇಳಿದರು.
ರಾಯಚೂರು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕ ಆಡಳಿತದಿಂದ ಸಹಿಸದೆ ಹೊಟ್ಟೆಕಿಚ್ಚು ಪಡುತ್ತಿರುವ ಕೆಲ ಹಿತಾಸಕ್ತಿಗಳು ಸುಳ್ಳು ಆರೋಪ ಮಾಡಿ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಳ್ಳುತ್ತಿವೆ. ಸುದೀರ್ಘ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದೇ ಆಡಳಿತ ನಡೆಸಿರುವ ಹಿಂದುಳಿದ ವರ್ಗದ ನಾಯಕನಿಗೆ ಬೆಂಬಲವಾಗಿ ಹಿಂದುಳಿದ ಸಮಾಜಗಳು ಗಟ್ಟಿಯಾಗಿ ಸ್ವಾಭಿಮಾನಿ ಸಮಾವೇಶದ ಮೂಲಕ ಬೆಂಬಲ ನೀಡಲು ಸಮುದಾಯಗಳು ನಿರ್ಧರಿಸಿವೆ ಎಂದರು.

ಹಿಂದುಳಿದ ವರ್ಗಗಳ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸುವದು. ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೊಳಿಸುವುದು ಹಾಗೂ ರಾಯಚೂರಿನಲ್ಲಿ ದೇವರಾಜ ಭವನ , ಪುತ್ಥಳಿ ನಿರ್ಮಾಣ ಮಾಡಲು ಮುಖ್ಯರಸ್ತೆಗೆ ಹೊಂದಿಕೊಂಡಂತೆ ಎರಡು ಎಕರೆ ಭೂಮಿ ಮಂಜೂರು ಮಾಡುವ ಕುರಿತು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಲಾಗುತ್ತದೆ. ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಗೆ ಹೆಚ್ಚಿನ ಅನುದಾನ ಒದಗಿಸಲು ವಿನಂತಿಸಲಾಗುತ್ತದೆ ಎಂದರು.
ಇದನ್ನು ಓದಿದ್ದೀರಾ? ಮುಂದಿನ 5 ವರ್ಷಗಳಲ್ಲಿ ಭಾರತದ ತಲಾ ಆದಾಯವು 2,000 ಡಾಲರ್ಗಳಷ್ಟು ಹೆಚ್ಚುತ್ತದೆ: ನಿರ್ಮಲಾ ಸೀತಾರಾಮನ್
ಕಳೆದ ನಾಲ್ಕು ವರ್ಷಗಳಿಂದ ಹಿಂದುಳಿದ ಜಾತಿ ಒಕ್ಕೂಟ ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಮುಖ್ಯಮಂತ್ರಿಗಳು ಸೇರಿ ಅನೇಕ ಸಚಿವರಿಗೆ ಮನವಿ ಮಾಡಲಾಗಿದೆ. ಮತ್ತೊಮ್ಮೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುತ್ತದೆ ಎಂದರು.
ಕೆಪಿಎಸ್ಸಿ ಮಾಜಿ ಸದಸ್ಯ ಶ್ರಿಕಾಂತರಾವ್ ಮಾತನಾಡಿ, ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಗೆ ಅನುದಾನ ನೀಡುವಲ್ಲಿ ತಾರತಮ್ಯವಾಗಿದೆ. ಸಮರ್ಪಕ ಅನುದಾನ ನೀಡಲು ಸಿಎಂ ಬಳಿ ಮನವಿ ಮಾಡುವದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕೆ.ಬಸವಂತಪ್ಪ, ಜಂಬಣ್ಣ ಯಕ್ಲಾಸಪುರು, ಖಾಜನಗೌಡ, ಕೆ.ಪಂಪಾಪತಿ, ಸುರೇಖಾ, ಈರಣ್ಣ ಹೂಗಾರ, ಪಾಗುಂಟಪ್ಪ, ಆಂಜಿನೇಯ್ಯ ಯಾದವ ಉಪಸ್ಥಿತರಿದ್ದರು.
