ಮುಂಬೈನ ಮಗಳು ಕಾಣೆಯಾಗಿರುವ ಕುರಿತು ಪೊಲೀಸರಿಗೆ ನೀಡಿದ ದೂರಿನಲ್ಲಿ ಆತ ಹಲವು ವರ್ಷಗಳಿಂದ ಲೈಂಗಿಕ ಕಿರುಕುಳ ಅನುಭವಿಸಿದ್ದಾನೆ
ತನ್ನ ಅಪ್ರಾಪ್ತ ಮಗಳು ನಾಪತ್ತೆಯಾಗಿದ್ದಾಳೆಂದು ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಲ್ಲಿ ಅಪಹರಣದ ದೂರು ದಾಖಲಸಿದ್ದಾರೆ. ಆದರೆ, ಆತನೇ ತನ್ನ ಮೇಲೆ ಕೆಲ ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ್ದನೆಂದು ತನಿಖೆಯಲ್ಲಿ ತಿಳಿದುಬಂದಿದೆ. ಆತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
46 ವರ್ಷದ ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈನ ಮಹಾಲಕ್ಷ್ಮಿ ಪ್ರದೇಶದ ನಿವಾಸಿಯಾಗಿದ್ದ 17 ವರ್ಷದ ಬಾಲಕಿ, ತನ್ನ ತಂದೆಯ ಕ್ರೌರ್ಯದಿಂದ ಬೇಸತ್ತು ಬುಧವಾರ ಮನೆ ತೊರೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯನ್ನು ಹುಡುಕಾಡಿರುವ ಆರೋಪಿಗೆ ಮಗಳು ಸಿಗದ ಹಿನ್ನೆಲೆಯಲ್ಲಿ ತಾರ್ಡಿಯೊ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಆತ ಆರೋಪಿಸಿದ್ದರು. ಆತನ ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಾಲಕಿಗಾಗಿಮ ಕುಡುಕಾಟ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಹಾಲಕ್ಷ್ಮಿ ರೈಲು ನಿಲ್ದಾಣದಲ್ಲಿ ಬಾಲಕಿ ಪೊಲೀಸರಿಗೆ ಸಿಕ್ಕಿದ್ದಾಳೆ. ಆಕೆಯನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ, ತನ್ನ ಮೇಲೆ ತಂದೆಯಿಂದಲೇ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ವಿವರಿಸಿದ್ದಾಳೆ ಎಂದು ಹೇಳಿದ್ದಾರೆ.
ತನ್ನ ಮೇಲೆ ಆರೋಪಿ ತಂದೆ ಕಳೆದ ಐದು ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ದೂರು ದಾಖಲಿಸಿದ್ದಾಳೆ. ಆಕೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ತಂದೆಯನ್ನು ಬಂಧಿಸಿದ್ದಾರೆ.