ಮುಂದಿನ 5 ವರ್ಷಗಳಲ್ಲಿ ಭಾರತದ ತಲಾ ಆದಾಯವು 2,000 ಡಾಲರ್‌ಗಳಷ್ಟು ಹೆಚ್ಚುತ್ತದೆ: ನಿರ್ಮಲಾ ಸೀತಾರಾಮನ್

Date:

Advertisements

ಪ್ರಸ್ತುತ, ಭಾರತದ ತಲಾ ಆದಾಯವು 2,730 ಡಾಲರ್‌ಗಳಿದ್ದು, ಇದು, ಮುಂದಿನ ಐದು ವರ್ಷಗಳಲ್ಲಿ 2,000 (2,700 ಡಾಲರ್‌ಗೆ) ಡಾಲರ್‌ಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಮಾತನಾಡಿದ ಅವರು, “ಭಾರತವು ಪ್ರಸ್ತುತ ತಲಾ ಆದಾಯದ ಮಟ್ಟವನ್ನು ತಲುಪಲು 75 ವರ್ಷಗಳನ್ನು ತೆಗೆದುಕೊಂಡಿತು. ದೇಶವು ಇತ್ತೀಚೆಗೆ ಜಾಗತಿಕವಾಗಿ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯುವ ಮೂಲಕ ಗಮನಾರ್ಹ ಮೈಲಿಗಲ್ಲು ಸಾಧಿಸಿದೆ” ಎಂದು ಹೇಳಿದ್ದಾರೆ.

“ಕಳೆದ 5 ವರ್ಷಗಳ ಅವಧಿಯಲ್ಲಿ 10ನೇ ಸ್ಥಾನದಿಂದ ಐದನೇ ಅತಿದೊಡ್ಡ ಆರ್ಥಿಕತೆಗೆ ಭಾರತವು ಜಿಗಿತ ಕಂಡಿದೆ. ಹೆಚ್ಚಿನ ಬೆಳವಣಿಗೆ ದರಗಳನ್ನು ಉಳಿಸಿಕೊಂಡಿದೆ. ಹಣದುಬ್ಬರವನ್ನು ಚೆನ್ನಾಗಿ ನಿರ್ವಹಿಸಿದೆ” ಎಂದು ಅವರು ಹೇಳಿದ್ದಾರೆ.

Advertisements

ವಿತ್ತೀಯ ನೀತಿಗಳ ಕುರಿತು ಮಾತನಾಡಿದ ಸೀತಾರಾಮನ್, “ವಿತ್ತೀಯ ಕೊರತೆಯನ್ನು ತಗ್ಗಿಸಲು ಸರ್ಕಾರವು ತನ್ನ ಬದ್ಧತೆಯನ್ನು ಮುಂದುವರೆಸಿದೆ. ಹಣಕಾಸಿನ ಕೊರತೆಯು 2024ರ ಆರ್ಥಿಕ ವರ್ಷದಲ್ಲಿ ಜಿಡಿಪಿಯ 5.6%ನಿಂದ 4.9%ಗೆ ಕುಸಿದಿದೆ ಎಂದು ಅಂದಾಜಿಸಲಾಗಿದೆ” ಎಂದಿದ್ದಾರೆ.

“2047ರ ವೇಳೆಗೆ, ಭಾರತವು ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸಲಿದೆ. ಆ ವೇಳೆಗೆ, ಹೊಸ ಭಾರತೀಯ ಯುಗವು ಅಭಿವೃದ್ಧಿ ಹೊಂದಿದ ದೇಶಗಳಂತೆಯೇ ಪ್ರಮುಖ ಗುಣಲಕ್ಷಣಗಳನ್ನು ಹೊಂದಿರುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X