ಮಹಿಳೆಯೊಬ್ಬರು ಎರಡು ವರ್ಷದ ಮಗುವಿನೊಂದಿಗೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಗುರುವಾರ ಸಂಜೆ ನಡೆದಿದೆ.
ಹುಮನಾಬಾದ್ ಪಟ್ಟಣದ ಜೋಶಿ ಬಡಾವಣೆಯ ನಿವಾಸಿ ರಾಧಾ (25) ಎಂಬುವವರು ಪಟ್ಟಣದ ವೀರಭದ್ರೇಶ್ವರ ದೇವಸ್ಥಾನ ಪಕ್ಕದ ಬಾವಿಯಲ್ಲಿ ತನ್ನ ಎರಡು ವರ್ಷದ ಮಗುವಿನೊಂದಿಗೆ ಬಾವಿಗೆ ಬಿದ್ದು ಸಾವನಪ್ಪಿದ್ದಾರೆ.
ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯದಿಂದ ರಾಧಾ ಎಂಬುವವರ ಮೃತದೇಹ ಹೊರ ತೆಗೆಯಲಾಗಿದೆ. ಮಗುವಿನ ದೇಹ ಇನ್ನೂ ಪತ್ತೆಯಾಗಿಲ್ಲ. ಕಾರ್ಯಾಚರಣೆ ಮುಂದುವರಿದಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!
ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ, ಕೌಟುಂಬಿಕ ಕಲಹ ಕಾರಣದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು. ಈ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ ಎಂದು ಹುಮನಾಬಾದ್ ಠಾಣೆ ಪಿಎಸ್‌ಐ ಸುರೇಶ ಈದಿನ.ಕಾಮ್ ಜೊತೆ ಮಾತನಾಡಿ ಮಾಹಿತಿ ನೀಡಿದ್ದಾರೆ.