ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ 2024-29ರ ಅವಧಿಗೆ ನಡೆದ ರಾಜ್ಯ ಪರಿಷತ್ ಸದಸ್ಯರ ಚುನಾವಣೆಯಲ್ಲಿ ರಾಜ್ಯ ಪರಿಷತ್ ಸದಸ್ಯರಾಗಿ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಅವಿರೋಧ ಆಯ್ಕೆಯಾಗಿದ್ದಾರೆ.
“ರಾಜ್ಯ ಪರಿಷತ್ ಸದಸ್ಯರ ಚುನಾವಣೆಯಲ್ಲಿ ಸಾರಿಗೆ ಇಲಾಖೆ ತಾಂತ್ರಿಕ ಮತ್ತು ಅಧಿಕಾರಿ ವೃಂದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆರ್‌ಟಿಒ ಮಲ್ಲಿಕಾರ್ಜುನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ” ಎಂದು ಚುನಾವಣೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಎ ಹನುಮನರಸಯ್ಯ ಘೋಷಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಆಲಂಬಾಡಿ ಕಾವಲು ಗ್ರಾಮದ ಆರ್‌ಟಿಒ ಮಲ್ಲಿಕಾರ್ಜುನ್ ಪ್ರಸ್ತುತ ನಾಗಮಂಗಲ ಮತ್ತು ಬೆಂಗಳೂರು ಕಚೇರಿಗಳ ಸಹಾಯಕ ಪ್ರಾದೇಶಿಕ ಸಾರಿಗೆ ಮುಖ್ಯ ಅಧಿಕಾರಿಯಾಗಿ ಹಾಗೂ ಆರ್‌ಟಿಒ ಸಂಘದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತ ಕೆ ಆರ್ ಪೇಟೆ ತಾಲೂಕಿನಲ್ಲೂ ಕ್ರಿಯಾಶೀಲ ಸಮಾಜಸೇವೆ ಸಲ್ಲಿಸುತ್ತಿರುವ ಅವರು ಅವಿರೋಧವಾಗಿ ರಾಜ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಳ್ಳಾರಿಗೆ ಜನಾರ್ದನ ರೆಡ್ಡಿ ಪ್ರವೇಶ : ಬಿಜೆಪಿಗೆ ವರವಾಗಲಿದೆಯೇ ಸಂಡೂರು ಉಪ ಚುನಾವಣೆ?
ರಾಜ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ, ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಸಚಿವರು, ವಿವಿಧ ಪಕ್ಷದ ಗಣ್ಯರು, ಸಂಘಟನೆಗಳ ಪದಾಧಿಕಾರಿಗಳು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ : ರಂಗನಾಥ್ ಮಾಕವಳ್ಳಿ