ಮೈಸೂರು | ಅರಣ್ಯ ಇಲಾಖೆ ಕಾರ್ಯಾಚರಣೆ; ಚಿರತೆ ಸೆರೆ

Date:

Advertisements

ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ಪಟ್ಟಣದ ಡ್ರೈವರ್ ಕಾಲೋನಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಚಿರತೆ ಹಸುವಿನ ಮೇಲೆ ದಾಳಿ ನಡೆಸಿ ಕೊಂದಿದೆ. ಇತ್ತೀಚೆಗೆ ಹೆಚ್ ಡಿ ಕೋಟೆ ಪಟ್ಟಣಕ್ಕೆ ಹೊಂದಿಕೊಂಡಿರುವ ಡ್ರೈವರ್ ಕಾಲೋನಿ, ಸುತ್ತ ಮುತ್ತಲಿನ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಿಗೆ ಆತಂಕ ಮೂಡಿಸಿತ್ತು.

ವಿದ್ಯುತ್ ಸರಿಯಾಗಿ ಇಲ್ಲದೇ ಇರುವುದೂ ಕೂಡ ಗ್ರಾಮಸ್ಥರಲ್ಲಿ ಭಯ ಉಂಟುಮಾಡಿದೆ. ಆತಂಕಕ್ಕೊಳಗಾದ ಗ್ರಾಮಸ್ಥರು, “ಚಿರತೆ ಹಿಡಿಯುವುದಷ್ಟೇ ಅಲ್ಲ. ನಾಲ್ಕು ಗಂಟೆ ವಿದ್ಯುತ್ ಬದಲಿಗೆ ಹತ್ತುಗಂಟೆ ವಿದ್ಯುತ್ ನೀಡಬೇಕು” ಎಂದು ಆಗ್ರಹ ಮಾಡಿದ್ದಾರೆ.

Advertisements
ಚಿರತೆ ಸೆರೆ ಯಶಸ್ವಿ

ರೈತ ಗುಂಡುಮಲ್ಲು ಅವರ ಜಮೀನಿನಲ್ಲಿ‌ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಏಳು ವರ್ಷದ ಚಿರತೆ ಸೆರೆ ಸಿಕ್ಕಿದೆ. ಒಂದು ಹಸು, ಕುರಿ, ಮೇಕೆಗಳನ್ನು ಬಲಿಪಡೆದಿದ್ದ ಚಿರತೆಯನ್ನು ಬಂಧಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದು, ಪರಿಹಾರ ನೀಡುವ ಭರವಸೆ ನೀಡಿ, ಸದರಿ ಭಾಗದಲ್ಲಿ ಅರಣ್ಯ ಸಿಬ್ಬಂದಿಗಳ ಗಸ್ತು ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಡೆಗೋಡೆ ಕುಸಿದು ಕಾರ್ಮಿಕ ಸಾವು; ಮಗು ಸೇರಿ ಮೂವರಿಗೆ ಗಂಭೀರ ಗಾಯ

ಕಳೆದ ವಾರವಷ್ಟೇ ಇದೇ ಸ್ಥಳದಲ್ಲಿ ಐದು ವರ್ಷದ ಚಿರತೆ ಸೆರೆಯಾಗಿತ್ತು. ವಾರ ಮಾಸುವ ಮುನ್ನ ಇನ್ನೊಂದು ಚಿರತೆ ಬೋನಿಗೆ ಬಿದ್ದಿರುವುದು ಜನರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ. ಹಾಗಾಗಿ ಗ್ರಾಮಸ್ಥರು ಇನ್ನಷ್ಟು ಕಾಡು ಪ್ರಾಣಿಗಳ ಓಡಾಟವಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X