ಸಚಿವ ಸಂಪುಟ ಸಭೆ ಚರ್ಚೆ ನಂತರ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:

Advertisements

ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಅ.4) ಕೊಪ್ಪಳದ ಗಿಣಿಗೇರ ಏರ್ ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ ಜಾತಿ ಗಣತಿ ಜಾರಿ ಮಾಡುವ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ರಾಯರೆಡ್ಡಿಯವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಮುಂದಿನ ವಾರ ಹಿಂದುಳಿದ ವರ್ಗಗಳ ಇಲಾಖಾ ಸಚಿವರ ಜೊತೆ ಚರ್ಚೆ ನಡೆಸುವೆ” ಎಂದು ಹೇಳಿದರು.

ಒಳಮೀಸಲಾತಿ ಜಾರಿ ಬಗ್ಗೆ ಪರಿಶೀಲನೆ

Advertisements

ಒಳಮೀಸಲಾತಿ ಜಾರಿ ತರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, “ಒಳಮೀಸಲಾತಿ ಜಾರಿಯ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ಹಾಗೂ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು” ಎಂದರು.

ಬಿಜೆಪಿ ಜೆಡಿಎಸ್ ಪಕ್ಷ ದುರ್ಬಲವಾಗುವ ಭಯ ಕಾಡುತ್ತಿದೆ

ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡು, ಸಿದ್ದರಾಮಯ್ಯನವರ ಪರವಾಗಿ ಬ್ಯಾಟಿಂಗ್ ಮಾಡಿದ ಬಗ್ಗೆ ಕುಮಾರಸ್ವಾಮಿಯವರು ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, “ಜಿ.ಟಿ.ದೇವೇಗೌಡರು ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾಗಿದ್ದು, ಹೇಳಿಕೆ ಸರಿಯಾಗಿಯೇ ಇರುತ್ತದೆ. ಭಾಜಪ ಮತ್ತು ಜೆಡಿಎಸ್ ನವರಿಗೆ ನಾನು ಅಧಿಕಾರದಲ್ಲಿದ್ದರೆ , ಅವರ ಪಕ್ಷಗಳು ದುರ್ಬಲವಾಗುವ ಭಯ ಅವರನ್ನು ಕಾಡುತ್ತಿದೆ” ಎಂದು ಹೇಳಿದರು.

ಊಹಾಪೋಹಗಳು ಬೇಡ

ಸಚಿವ ಸತೀಶ್ ಜಾರಕಿಹೊಳಿಯವರು ಪಕ್ಷದ ವರಿಷ್ಠರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆಯವರನ್ನು ಪಕ್ಷದಲ್ಲಿ ಸಚಿವರಾಗಿರುವ ಸತೀಶ್ ಜಾರಕಿಹೊಳಿಯವರು ಭೇಟಿಯಾಗುವುದು ತಪ್ಪೇನಲ್ಲ. ಇಲ್ಲಸಲ್ಲದ ಊಹಾಪೋಹಗಳಿಗೆ ಅವಕಾಶ ನೀಡಬಾರದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X