ರಾಯಚೂರು | ಕೂಲಿಕಾರರ ಹೆಸರಲ್ಲಿ ಬೋಗಸ್ ಹಾಜರಾತಿ: ಜೆಇ, ಪಿಡಿಒ ಮೇಲೆ ಕ್ರಮಕ್ಕೆ ಲಿಂಗಣ್ಣ ಮಕಾಶಿ ಆಗ್ರಹ

Date:

Advertisements

ರಾಯಚೂರು ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನ ಮಾಡಲಾಗುತ್ತಿದ್ದ ನಾಲಾ ಅಭಿವೃದ್ಧಿ ಕೆಲಸಗಳಲ್ಲಿ ಕೂಲಿಕಾರರು ಇಲ್ಲದೆ ಬೋಗಸ್ ಹಾಜರಾತಿ ಮಾಡುತ್ತಿರುವ ಜೆಇ, ಪಿಡಿಓ ಮೇಲೆ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯಿಂದ ತಾಲೂಕು ಪಂಚಾಯತ್ ಸಹಾಯ ನಿರ್ದೇಶಕ ಅಣ್ಣರಾವ್ ಅವರಿಗೆ ಮನವಿ ಸಲ್ಲಿಸಲಾಯಿತು.

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಬಯಸಿ ಅರ್ಜಿ ಸಲ್ಲಿಸಿದ ಕೂಲಿಕಾರರಿಗೆ ತಕ್ಷಣ ಕೆಲಸ ನೀಡಬೇಕು, ಕೆಲಸದಲ್ಲಿ ಇರುವ ಕೂಲಿಕಾರರಿಗೆ ಸರಿಯಾದ ಹಾಜರಿ ಸಮರ್ಪಕ ಕೂಲಿ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಕೆಲಸ ಮಾಡದೇ ಮನೆಯಲ್ಲಿ ಇರುವ ಕೂಲಿಕಾರರ ಹೆಸರಲ್ಲಿ ಬೋಗಸ್ ಹಾಜರಾತಿ ಹಾಕಿ ಲಕ್ಷಾಂತರ ರೂಪಾಯಿ ವಂಚನೆ ಮಾಡಲಾಗುತ್ತಿದೆ‌. ಬೋಗಸ್ ಹಾಜರಾತಿಗೆ ಕಡಿವಾಣ ಮಾಡುವಂತೆ ಅನೇಕ ಬಾರಿ ಪಿಡಿಓ ಮತ್ತು ಜೆಇ ಅವರ ಗಮನಕ್ಕೆ ತರಲಾಗಿದೆ. ಆದರೆ ಈ ಬಗ್ಗೆ ಎಚ್ಚೆತ್ತುಕೊಳ್ಳದೇ ಮನಬಂದಂತೆ ಎನ್ಎಂಎಂಎಸ್ ಹಾಜರಾತಿ ಮಾಡಲು ಮುಂದಾಗಿದ್ದರಿಂದ ಬೋಗಸ್ ಹಾಜರಾತಿ ಪ್ರತಿಗಳೊಂದಿಗೆ ಉದ್ಯೋಗ ಖಾತ್ರಿ ನಿರ್ವಹಣೆಯ ಸಹಾಯ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ರಾಮನಗರ | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಆದ್ಯತೆ: ಪ್ರಗತಿಪರ ಸಂಘಟನೆಗಳಿಂದ ಸ್ವಾಗತ

ಇಡೀ ತಾಲೂಕಿನಲ್ಲಿ ಜಾಲಹಳ್ಳಿ ಗ್ರಾಮ ಪಂಚಾಯತಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು, ಕೂಲಿಕಾರರ ಸಂಖ್ಯೆಯೂ ಹೆಚ್ಚಾಗಿದೆ. ಪಿಡಿಓ ಮತ್ತು ನರೇಗಾ ಸಿಬ್ಬಂದಿಗಳ ಬೇಜವಬ್ದಾರಿಯಿಂದ ಉದ್ಯೋಗ ಖಾತ್ರಿ ಯೋಜನೆಯ ಹಣ ದುರ್ಬಳಕೆ ಮಾಡಲಾಗುತ್ತಿದ್ದರೂ ನಿಯಂತ್ರಿಸಲಾಗದ ಪಿಡಿಓ ಮತ್ತು ಎನ್ಎಂಎಂಎಸ್ ಬೋಗಸ್ ಹಾಜರಾತಿ ಮಾಡುತ್ತಿರುವ ಜೆಇ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ದುಡಿಯುವ ಕೂಲಿಕಾರರಿಗೆ ಕೆಲಸ ಕೂಲಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ‌.

ಇದೇ ಸಂದರ್ಭದಲ್ಲಿ ತಾಲೂಕು ಸಮಿತಿ ಅಧ್ಯಕ್ಷ ಲಿಂಗಣ್ಣ ಮಕಾಶಿ, ಕಾರ್ಯದರ್ಶಿ ಬಸವರಾಜ, ಶಿವರಾಜ ಇದ್ದರು.

ವರದಿ : ಶಿವರಾಮ ಕಟ್ಟಿಮನಿ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X