ಬಿಗ್ ಬಾಸ್ | ಸ್ಪರ್ಧಿಗಳನ್ನು ಕೂಡಿಟ್ಟು, ಗಂಜಿ ಊಟ; ಮಾನವ ಹಕ್ಕುಗಳ ಆಯೋಗಕ್ಕೆ ದೂರು

Date:

Advertisements

ಕಲರ್ಸ್ ಕನ್ನಡ ವಾಹಿನಿ ನಡೆಸುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ತುರ್ತಾಗಿ ಶೋ ನಿಲ್ಲಿಸಿ, ಸಂಬಂಧಪಟ್ಟ ಇಲಾಖೆಯಿಂದ ತನಿಖೆ ನಡೆಸಲು ಕೋರಿ ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ದೂರು ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಚೇರಿಗೆ ಆಗಮಿಸಿ ದೂರು ನೀಡಿದ ಅವರು, ಚಿತ್ರನಟ-ಶೋ ನಿರೂಪಕ ಕಿಚ್ಚ ಸುದೀಪ್, ಕಲರ್ಸ್ ಕನ್ನಡ ಟಿವಿ ಬಿಜಿನೆಸ್ ಹೆಡ್, ವಯಾಕಾಮ್ 18 ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

“ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮದ ಆರಂಭದಲ್ಲಿಯೇ ಸ್ವರ್ಗ ಮತ್ತು ನರಕ ಎಂಬ ಎರಡು ಮನೆಗಳನ್ನು ಸೃಷ್ಟಿಸಲಾಗಿದೆ. ಒಟ್ಟು ಹದಿನೇಳು ಸ್ಪರ್ಧಿಗಳ ಪೈಕಿ 10 ಮಂದಿಯನ್ನು ಸ್ವರ್ಗಕ್ಕೂ, 7 ಮಂದಿಯನ್ನು ನರಕದಲ್ಲೂ ಇರಿಸಲಾಗಿದೆ. ಸ್ವರ್ಗ ನಿವಾಸಿಗಳಿಗೆ ಉತ್ತಮ ಊಟ, ಮಲಗಲು ಮಂಚ ಸೇರಿದಂತೆ ಐಶಾರಾಮಿ ಸೌಲಭ್ಯಗಳನ್ನು ಒದಗಿಸಲಾಗಿದೆ. ನರಕ ನಿವಾಸಿಗಳನ್ನು ಜೈಲಿನ ಖೈದಿಗಳ ಹಾಗೆ ಒಂದು ಬ್ಯಾರಾಕ್ ನಲ್ಲಿ ಬಂಧಿ ಮಾಡಿ ಇಡಲಾಗಿದೆ. ಅವರಿಗೆ ಶೋ ಆರಂಭಗೊಂಡ ದಿನದಿಂದ ಕೇವಲ ಗಂಜಿ ಊಟ ನೀಡಲಾಗುತ್ತಿದೆ. ಅಷ್ಟೇ ಅಲ್ಲ, ಅವರಿಗೆ ಪ್ರತ್ಯೇಕ ಶೌಚಾಲಯದ ಅವಕಾಶವೂ ಇಲ್ಲ. ಸ್ವರ್ಗ ನಿವಾಸಿಗಳನ್ನು ವಿನಂತಿಸಿ ಅವರು ಬೀಗ ತೆಗೆದರಷ್ಟೇ ಅವರು ಶೌಚಾಲಯಕ್ಕೆ ಹೋಗಲು ಸಾಧ್ಯ” ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.

Advertisements

“ದಿ. 2-10-2024ರಂದು ಪ್ರಸಾರವಾದ ಕಾರ್ಯಕ್ರಮದಲ್ಲಿ ನರಕವಾಸಿ ಸ್ಪರ್ಧಿಗಳು ತಮಗೆ ಬಂದಾಗಿಂದಲೂ ಕೇವಲ ಗಂಜಿ ಊಟ ಕೊಡಲಾಗುತ್ತಿದೆ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತಾರೆ. ನರಕವಾಸಿಗಳಿಗೆ ಶೌಚಕ್ಕೆ ಅವಸರವಾದಾಗ ಸ್ವರ್ಗವಾಸಿ ಸ್ಪರ್ಧಿಗಳು ಸ್ವಲ್ಪ ತಡೆದುಕೊಳ್ಳಿ ಎಂದು ಹೇಳುವುದು, ಇದಕ್ಕೆ ನರಕವಾಸಿ ಸ್ಪರ್ಧಿಗಳು ಪ್ರತಿಭಟಿಸುವುದನ್ನು ಕೂಡ ಪ್ರಸಾರ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಬಹುಮಾನ ಮತ್ತು ಹಣದ ಆಮಿಷ ಒಡ್ಡಿ ಸ್ಪರ್ಧಿಗಳನ್ನು ಬಿಡದಿ ಸಮೀಪದ ನಿರ್ಜನ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಮನೆಯೊಂದರಲ್ಲಿ ಕೂಡಿಹಾಕಲಾಗಿದೆ. ಟಾಸ್ಕ್ ಗಳ ಹೆಸರಲ್ಲಿ ಅವರಿಗೆ ದೈಹಿಕ, ಮಾನಸಿಕ ಹಿಂಸೆಯನ್ನು ನೀಡಲಾಗುತ್ತಿದೆ. ಹಣ, ಬಹುಮಾನದ ಆಸೆಗೆ ಕಾಂಟ್ರಾಕ್ಟ್ ಗೆ ಸಹಿ ಮಾಡಿದ ಸ್ಪರ್ಧಿಗಳು ಅಲ್ಲಿ ನಡೆಯುವ ಶೋಷಣೆಯನ್ನು ಹೊರಗೆ ಹೇಳದಂತೆ ಬಾಯಿಮುಚ್ಚಿಸಲಾಗಿದೆ” ಎಂದು ದೂರಿದ್ದಾರೆ.

“ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಗಳನ್ನು ಅಕ್ರಮವಾಗಿ ಬಂಧಿಸಿಟ್ಟು, ಅವರಿಗೆ ಸರಿಯಾದ ಪೌಷ್ಠಿಕ ಆಹಾರವನ್ನೂ ನೀಡದೆ, ಅವರ ದೇಹಬಾಧೆ ತೀರಿಸಿಕೊಳ್ಳಲೂ ಇತರರ ಅನುಮತಿ ಪಡೆಯುವಂಥ ಪರಿಸ್ಥಿತಿ ನಿರ್ಮಿಸಿರುವುದು ಅತ್ಯಂತ ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿರುತ್ತದೆ. ಈ ಶೋಷಣೆಗೆ ಒಂದು ವೇಳೆ ಆಮಿಷಕ್ಕೆ ಒಳಗಾಗಿ ಸ್ಪರ್ಧಿಗಳು ಒಪ್ಪಿಗೆ ನೀಡಿದ್ದರೂ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ವಕೀಲೆ ರಕ್ಷಿತಾ ಪಿ ಸಿಂಗ್‌ ಕೂಡ ದೂರು

ಖಾಸಗಿ ವಾಹಿನಿ ‘ಕಲರ್ಸ್ ಕನ್ನಡ’ದಲ್ಲಿ ಪ್ರಸಾರವಾಗುತ್ತಿರುವ ‘ಬಿಗ್‌ಬಾಸ್ 11’ ರಿಯಾಲಿಟಿ ಶೋನಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಮಹಿಳೆಯರ ಹಕ್ಕುಗಳನ್ನು ದಮನ ಮಾಡಿ, ಮಹಿಳಾ ಸ್ಪರ್ಧಿಗಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ವಕೀಲೆ ರಕ್ಷಿತಾ ಪಿ ಸಿಂಗ್‌ ಆರೋಪಿಸಿದ್ದಾರೆ. ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಕಳೆದ ಭಾನುವಾರದಿಂದ ‘ಬಿಗ್‌ಬಾಸ್‌ 11’ ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. ನಟ ಸುದೀಪ್ ಅವರು ಕಾರ್ಯಕ್ರಮದ ನಿರೂಪಣೆ ಮುಂದುವರೆಸಿದ್ದಾರೆ. ಬಿಗ್‌ಬಾಸ್‌ ಸೆಟ್‌ನಲ್ಲಿ ಸ್ವರ್ಗ ಮತ್ತು ನರಕ ಎಂದು ವಿಭಜಿಸಿ, ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಇದರಲ್ಲಿ, ನರಕವೆಂದು ವರ್ಗೀಕರಿಸಲಾದ ಭಾಗದಲ್ಲಿ ಸ್ಪರ್ಧಿಗಳನ್ನು ಕೈದಿಗಳಂತೆ ಇರಿಸಲಾಗಿದೆ. ಆದರೆ, ಭಾರತದ ನಾಗರಿಕರನ್ನು ಬಂಧನದಲ್ಲಿರಿಸುವ ಹಕ್ಕು ಖಾಸಗಿ ವ್ಯಕ್ತಿಗಳಿಗೆ ಇರುವುದಿಲ್ಲ. ಈ ಕಾನೂನನ್ನು ಬಿಗ್‌ ಬಾಸ್ ತಂಡ ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X