ಚನ್ನಪಟ್ಟಣ | ಪ್ರತಿ ಪಂಚಾಯ್ತಿಯಲ್ಲಿ ₹2-5 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿ: ಡಿ ಕೆ ಶಿವಕುಮಾರ್

Date:

Advertisements

ಚನ್ನಪಟ್ಟಣದ ಪ್ರತಿ ಪಂಚಾಯ್ತಿಯಲ್ಲಿ ₹2 ಕೋಟಿಯಿಂದ ₹5-6 ಕೋಟಿವರೆಗೂ ಅನುದಾನ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಚನ್ನಪಟ್ಟಣದ ವಿವಿಧ ಪಂಚಾಯ್ತಿ ಮಟ್ಟದಲ್ಲಿ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಿದ ವೇಳೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಚನ್ನಪಟ್ಟಣದಲ್ಲಿ ₹300 ಕೋಟಿಗೂ ಹೆಚ್ಚಿನ ಅನುದಾನದ ಅಭಿವೃದ್ಧಿ ಯೋಜನೆಗಳನ್ನು ನಮ್ಮ ಸರ್ಕಾರ ಕೈಗೆತ್ತಿಕೊಂಡಿದೆ. ಈ ತಾಲೂಕಿನ ಜನರಿಗೆ 5 ಸಾವಿರ ಮನೆಗಳನ್ನು ಮಂಜೂರು ಮಾಡಿ, ಫಲಾನುಭವಿಗಳಿಗೆ ಹಂಚಲಾಗುತ್ತಿದೆ. ಪ್ರತಿ ಪಂಚಾಯ್ತಿಯಲ್ಲಿ 100, 150 ಮನೆಗಳನ್ನು ನೀಡಲಾಗುತ್ತಿದೆ. ಇನ್ನು ನೀರಾವರಿ ಕಾಲುವೆ ಅಭಿವೃದ್ಧಿ, ಕೆರೆ ನೀರು ತುಂಬಿಸುವ ಕೆಲಸ ನಡೆಯಲಿದೆ” ಎಂದರು.

Advertisements

“ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಇಡೀ ದಿನ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಶುಕ್ರವಾರ ನಾನು ಹಾಗೂ ರಾಮಲಿಂಗಾ ರೆಡ್ಡಿ ಅವರು ಸೇರಿ ಪಂಚಾಯ್ತಿ ಮಟ್ಟದ ಕಾಮಗಾರಿಗಳ ಉದ್ಘಾಟನೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ನಾನೇ ಅಭ್ಯರ್ಥಿ ಎಂದು ಮತ ಹಾಕಿ

ಮುಂದಿನ ಒಂದು ವಾರದಲ್ಲಿ ಉಪಚುನಾವಣೆ ದಿನಾಂಕ ಪ್ರಕಟವಾಗಲಿದ್ದು, ಅಭ್ಯರ್ಥಿ ಆಯ್ಕೆ ಬಗ್ಗೆ ಕೇಳಿದಾಗ, “ನಾವು ಅಭ್ಯರ್ಥಿ ಬಗ್ಗೆ ಆಲೋಚಿಸುತ್ತಿಲ್ಲ. ಇಲ್ಲಿ ನಾನೇ ಅಭ್ಯರ್ಥಿ ಎಂದು ಭಾವಿಸಿ ಮತ ಹಾಕಿ ಎಂದು ನಮ್ಮ ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ. ವ್ಯಕ್ತಿ ಹಾಗೂ ಸರ್ಕಾರ ನಾನೇ ಆಗಿದ್ದು, ಅಭ್ಯರ್ಥಿಗಿಂತ ನನ್ನ ಮುಖ ನೋಡಿ ಮತ ಹಾಕಿ ಎಂದು ಮತದಾರರಲ್ಲಿ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ಕುಮಾರಸ್ವಾಮಿ ಅವರ ವಿರುದ್ಧ 50 ಕೋಟಿ ವಸೂಲಿ ಆರೋಪ ಹಾಗೂ ಎಫ್ಐಆರ್ ದಾಖಲಾಗಿರುವ ಬಗ್ಗೆ ಕೇಳಿದಾಗ, “ಗುರುವಾರ ನಡೆದ ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ನಿರತವಾಗಿದ್ದೆ. ಶುಕ್ರವಾರ ಚನ್ನಪಟ್ಟಣ ಪ್ರವಾಸ ಮಾಡುತ್ತಿದ್ದೇನೆ. ಹೀಗಾಗಿ ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರ ಖಾಸಗಿ ವಿಚಾರಕ್ಕೆ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಹೇಳಿದರು.

ಜಾತಿ ಗಣತಿ; ಎಲ್ಲಾ ಸಮುದಾಯಗಳಿಗೆ ನ್ಯಾಯ ಒದಗಿಸಲಾಗುವುದು

ಜಾತಿ ಗಣತಿ ವಿಚಾರವಾಗಿ ಡಿ.ಕೆ. ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಪಕ್ಷದ ನೀತಿಯಂತೆ ನಾವು ಈ ವಿಚಾರದಲ್ಲಿ ತೀರ್ಮಾನ ಮಾಡುತ್ತೇವೆ. ಎಲ್ಲಾ ಸಮುದಾಯಗಳಿಗೂ ನಾವು ನ್ಯಾಯ ಒದಗಿಸಿಕೊಡುತ್ತೇವೆ. ಈ ವರದಿಯಲ್ಲಿ ಏನಾದರೂ ನ್ಯೂನ್ಯತೆ ಇದ್ದರೆ ಸಿದ್ದರಾಮಯ್ಯ, ನಾನು ಹಾಗೂ ನಮ್ಮ ಪಕ್ಷದ ನಾಯಕರು ಕೂತು ಸರಿಪಡಿಸುತ್ತೇವೆ. ಈ ವಿಚಾರವಾಗಿ ಗೊಂದಲ ಮಾಡಿಕೊಳ್ಳುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X