ಬಿಜೆಪಿ ಟ್ವೀಟ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ದಿನೇಶ್ ಗುಂಡೂರಾವ್ ಪತ್ನಿ

Date:

Advertisements

ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಅನಗತ್ಯವಾಗಿ ಬಿಜೆಪಿ ತಮ್ಮ ಹೆಸರನ್ನ ಎಳೆದು ತರುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ನಾನು ರಾಜಕೀಯದಲ್ಲಿ ಇಲ್ಲ.‌ ರಾಜಕೀಯ ಕುಟುಂಬದಲ್ಲಿರುವ ಒಬ್ಬ ಮಹಿಳೆ ಅಷ್ಟೇ. ರಾಜಕೀಯಕ್ಕೂ ನನಗು ಸಂಬಂಧವಿಲ್ಲ. ನಾನು ಮುಸ್ಲಿಂ ಕುಟುಂಬದಿಂದ ಬಂದು ಹಿಂದು ಕುಟುಂಬದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ಬಿಜೆಪಿ ತನ್ನ ರಾಜಕೀಯಕ್ಕಾಗಿ ನನ್ನ ಹೆಸರನ್ನ ತಳುಕು ಹಾಕುವುದು ಸರಿಯಲ್ಲ ಎಂದು ಟಬು ರಾವ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮೊನ್ನೆಯಷ್ಟೇ ಸಾವರ್ಕರ್ ಕುರಿತ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಟೀಕಿಸುವ ಭರದಲ್ಲಿ ಬಿಜೆಪಿ, ಸಚಿವರ ಪತ್ನಿ ಟಬು ರಾವ್ ಅವರ ಹೆಸರನ್ನ ಪ್ರಸ್ತಾಪಿಸಿತ್ತು. ಬಿಜೆಪಿ ಟ್ವೀಟ್ ನಲ್ಲಿ ತಮ್ಮ ಹೆಸರನ್ನ ಎಳೆದು ತಂದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಈ ಬಗ್ಗೆ ಸಂಬಂಧಪಟ್ಟವರನ್ನ ಕರೆಸಿ ವಿಚಾರಣೆ ನಡೆಸುವಂತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

Advertisements

ರಾಜಕೀಯವಾಗಿ ಟೀಕೆ ಟಿಪ್ಪಣಿ ಮಾಡುವಾಗ ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿಯ ಶಾಸಕ ಯತ್ನಾಳ್ ಅವರು ಇದೇ ರೀತಿಯ ಆಕ್ಷೇಪಾರ್ಹ ಹೇಳಿಕೆ ನೀಡಿದಾಗ ಟಬು ರಾವ್ ಅವರು ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಪ್ರಕರಣಕ್ಕೆ ಸ್ಟೇ ಕೋರಿದ್ದ ಯತ್ನಾಳ್ ಅವರಿಗೆ ಹೈ ಕೋರ್ಟ್ ನ ಜಸ್ಟಿಸ್ ನಾಗಪ್ರಸನ್ನ ಅವರ ಪೀಠ ತರಾಟೆಗೆ ತೆಗೆದುಕೊಂಡಿದ್ದಲ್ಲದೇ, ತಡೆಯಾಜ್ಞೆ ನೀಡಲು ನಿರಾಕರಿಸಿದ್ದರು. ಆದರೆ ಇದೀಗ ಬಿಜೆಪಿ ತನ್ನ ಟ್ವೀಟರ್ ನಲ್ಲಿ ಟಬು ರಾವ್ ಅವರ ಹೆಸರನ್ನ ಉಲ್ಲೇಖಿಸಿ ಟೀಕಿಸಿದೆ. ಬಿಜೆಪಿಯ ಈ ನಡೆ ಪುನಾರಾವರ್ತನೆ ಆಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X