ಪ್ರವಾದಿ ಮುಹಮ್ಮದ್ ಕುರಿತು ಯತಿ ನರಸಿಂಹಾನಂದ್ ಪ್ರಚೋದನಾಕಾರಿ ಹೇಳಿಕೆ; ಕ್ರಮಕ್ಕೆ ಆಗ್ರಹ

Date:

Advertisements

ಕೋಮು ದ್ವೇಷ ಭಾಷಣ ಮಾಡುವ ಮೂಲಕ ವಿವಾದ ಸೃಷ್ಟಿಸಿ, ಸುದ್ದಿಯಾಗಿರುವ ಅರ್ಚಿ ಯತಿ ನರಸಿಂಹಾನಂದ್, ಇತ್ತೀಚೆಗೆ ಮತ್ತೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಕುರಿತು ದ್ವೇಷದ ಭಾಷಣ ಮಾಡಿದ್ದಾರೆ.

‘ಎಲ್ಲ ದಸರಾದ ಸಂದರ್ಭದಲ್ಲಿ ಇತರೆ ಪ್ರತಿಕೃತಿಯನ್ನು ಸುಡುವ ಬದಲು ಪ್ರವಾದಿ ಮುಹಮ್ಮದ್ ಅವರ ಪ್ರತಿಕೃತಿಯನ್ನು ಸುಡಬೇಕು’ ಎಂದು ಕರೆಕೊಟ್ಟಿರುವ ಅವರ ಕೋಮು ದ್ವೇಷ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅವರ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡಿರುವ ಪತ್ರಕರ್ತ ಮುಹಮ್ಮದ್ ಝಬೇರ್, “ಕಳೆದ ನಾಲ್ಕು ವರ್ಷಗಳಿಂದ ಯತಿ ನರಸಿಂಹಾನಂದ್ ವಿರುದ್ಧ ಹಲವು ಎಫ್‌ಐಆರ್‌ಗಳು ದಾಖಲಾಗಿವೆ. ಆದರೂ, ಅವರ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

“ಕೋಮು ದ್ವೇಷ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ನರಸಿಂಹಾನಂದ್ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಝುಬೇರ್ ಒತ್ತಾಯಿಸಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ಭವನ ಮತ್ತು ಸಿಎಂ ಆದಿತ್ಯನಾಥ್, ಉತ್ತರಪ್ರದೇಶ ಪೊಲೀಸರು ಮತ್ತು ಗಾಝಿಯಾಬಾದ್ ಪೊಲೀಸರನ್ನು ಟ್ಯಾಗ್‌ ಮಾಡಿದ್ದಾರೆ. “ಇಂತಹ ಭಾಷಣಗಳು ಮುಂದುವರಿಯಲು ಏಕೆ ಅನುಮತಿ ನೀಡುತ್ತಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

ನರಸಿಂಹಾನಂದ್ ವಿರುದ್ಧ ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ಆರಂಭಗೊಂಡ ಬೆನ್ನಲ್ಲೇ, ಸಿಹಾನಿ ಗೇಟ್ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಗಾಝಿಯಾಬಾದ್ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಯತಿ ನರಸಿಂಹಾನಂದ್ ಅವರ ಹೇಳಿಕೆಯು ಈಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸುದ್ದಿಯಾಗಿದ್ದು, ನಾನಾ ದೇಶಗಳ ಮುಸ್ಲಿಂ ಧಾರ್ಮಿಕ ಮುಖಂಡರು ಖಂಡಿಸಿದ್ದು. ಮೋದಿ ಸರ್ಕಾರವು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X