ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ: ಸಿಎಂ ಸಿದ್ದರಾಮಯ್ಯ ಕರೆ

Date:

Advertisements

ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಕನ್ನಡ ಸಂಭ್ರಮ 50ರ ಅಂಗವಾಗಿ ರಾಯಚೂರಲ್ಲಿ ಆಯೋಜಿಸಿದ್ದ ಗೋಕಾಕ್ ಚಳವಳಿ: ಹಿನ್ನೋಟ-ಮುನ್ನೋಟ” ಬೃಹತ್ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

“ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. ಕನ್ನಡ ಅಗ್ರ ಭಾಷೆಯಾಗಲಿ, ಕನ್ನಡ ಮೊದಲ ಭಾಷೆಯಾಗಲಿ. ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಬಳಿಕ ಇದೇ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯಿತು. ಪ್ರತಿಯೊಂದು ಭಾಷೆಯನ್ನೂ ಕಲಿಯಿರಿ, ಆದರೆ ಆಡಳಿತ ಭಾಷೆ ಕನ್ನಡ ಆಗಿರಲಿ” ಎಂದರು.

Advertisements

“ಕನ್ನಡ ನೆಲದಲ್ಲಿ ನಡೆದ ಕನ್ನಡ ಭಾಷಾ ಚಳವಳಿ ಅತ್ಯಂತ ಚರಿತ್ರಿಕವಾದದ್ದು. ನಾನು ಕಾವಲು ಸಮಿತಿ ಅಧ್ಯಕ್ಷನಾಗಿದ್ದಾಗ ಇಂಗ್ಲಿಷ್ ಟೈಮ್ ರೈಟರ್ ಗಳನ್ನು ಕಿತ್ತುಕೊಂಡು ಕನ್ನಡ ಟೈಪ್ ರೈಟರ್ ಗಳನ್ನು ಕೊಡ್ತಿದ್ದೆ” ಎಂದು ತಮ್ಮ ಅವಧಿಯ ಕನ್ನಡ ಕಟ್ಟುವ ಕೆಲಸವನ್ನು ಸ್ಮರಿಸಿದರು.

ಎಲ್ಲ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ದಾರಾಳತನ ಬೇಡ ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಹಿರಿಯ ಕನ್ನಡ ಚಳವಳಿಗಾರರನ್ನು, ಗೋಕಾಕ್ ಹೋರಾಟಗಾರರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.

ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್, ಬೋಸರಾಜು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಸೇರಿ ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರು, ಕನ್ನಡ ಚಳವಳಿಗಾರರು, ಹೋರಾಟಗಾರರು, ಕನ್ನಡದ ಕಾರ್ಯಕರ್ತರು ಉಪಸ್ಥಿತರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X