‘ನನ್ನ ಜೀವನವೇ ನನ್ನ ಸಂದೇಶ’ ಎಂದು ಜಗತ್ತಿಗೆ ತಿಳಿಸಿದ ಮಹಾತ್ಮ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಗದಗ ಬೆಟಗೇರಿ ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗದಗ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಸ್ವಚ್ಛತಾ ಅಭಿಯಾನ” ನಡೆಸಲಾಯಿತು.
ಶ್ರಮದಾನಕ್ಕೆ ಚಾಲನೆ ನೀಡಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗಾಂಧಿ ಜಯಂತಿ ಅಂಗವಾಗಿ ನಡೆಸುತ್ತಿರುವ ಸ್ಚಚ್ಛತಾ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಎಲ್ಲರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗಗಳಿಂದ ಸಂರಕ್ಷಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಮೊದಲು ಇರಾನ್‌ನ ಪರಮಾಣು ಕೇಂದ್ರಕ್ಕೆ ದಾಳಿ ನಡೆಸಿ: ಇಸ್ರೇಲ್‌ಗೆ ಡೊನಾಲ್ಡ್ ಟ್ರಂಪ್ ಸಲಹೆ
ಶ್ರಮದಾನದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್., ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಮಹೇಶ ಪೋತದಾರ, ನಗರಸಭೆ ಅಧಿಕಾರಿಗಳಾದ ಆನಂದ ಬದಿ, ಹುಚ್ಚೇಶ್ವರ ಬಂಡಿವಡ್ಡರ ಸೇರಿದಂತೆ ನಗರಸಭೆಯ ಸದಸ್ಯರು, ಸಿಬ್ಬಂದಿ, ಗದಗ ರೆಡ್ ಕ್ರಾಸ್ ಸಂಸ್ಥೆ, ಎನ್.ಸಿ.ಸಿ ವಿದ್ಯಾರ್ಥಿಗಳು, ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.
