ಟಿಪ್ಪರ್ ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಸವಾರನನ್ನು ನಾಗರಾಜ್ ಮುಧೋಳಮಠ (60) ಎಂದು ಗುರುತಿಸಲಾಗಿದೆ. ಟಿಪ್ಪರ್ ಹರಿದ ಪರಿಣಾಮ ಸ್ಕೂಟಿ ಸವಾರ ಅಪ್ಪಚ್ಚಿಯಾಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಗದಗ | ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ
ಸ್ಥಳಕ್ಕೆ ಡಿವೈಎಸ್ಪಿ ಡಾ.ಗಿರೇಶ ಬೋಜಣ್ಣನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.