ವಿಜಯಪುರ ಜಿಲ್ಲೆಯು ಇಂಡಿ ತಾಲೂಕಿನ ಜಿಗಜೇವಣಗಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿದ್ದು, ಇದನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳ ಹಾಗೂ ಮುಖ್ಯ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಿಗಜೇವಣಗಿ ಪಂಚಾಯತಿ ವ್ಯಾಪ್ತಿಯ ಸುಮಾರು ನಾಲ್ಕು ಗ್ರಾಮಗಳು ಇದ್ದು, ಆದರೆ ಈ ನಾಲ್ಕು ಗ್ರಾಮಗಳಲ್ಲಿ ಯಾವುದೇ ಮೂಲ ಸೌಲಭ್ಯಗಳನ್ನು ಕಲ್ಪಿಸದೆ ಈಗ ಗಾಂಧಿ ಗ್ರಾಮ ಪುರಸ್ಕಾರ ನೀಡಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ. ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸುಮಾರ 300 ಕಾಮಗಾರಿಗಳು ಸರಿಯಾದ ಪ್ರಮಾಣದಲ್ಲಿ ಆಗಿರುವುದಿಲ್ಲ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಸುಖಾ ಸುಮ್ಮನೆ ಮೂಲಭೂತ ಸೌಲಭ್ಯಗಳು ನೀಡಲಾಗಿದೆ ಎಂದು ಹೇಳಿ ಅಭಿವೃದ್ಧಿಗೆ ಕಾಮಗಾರಿಗಳಿಗೆ ಕುಂಠಿವನ್ನುಂಟು ಮಾಡಲಾಗಿದೆ. ಅಧಿಕಾರಿಗಳು ಸರ್ಕಾರಕ್ಕೆ ಸುಳ್ಳು ಮಾಹಿತಿ ಹೇಳಿ ಈ ರೀತಿಯ ಪುರಸ್ಕಾರಕ್ಕೆ ಭಾಜನಗೊಳಿಸಲಾಗಿದೆ. ಆದ್ದರಿಂದ, ಗಾಂಧಿ ಗ್ರಾಮ ಪುರಸ್ಕಾರವನ್ನು ಹಿಂಪಡೆದು ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಹಮೀದ್ ಎಸ್ ಇನಾಮಾದಾರ, ವಿಕ್ರಂ ವಾಘಮೊರೆ, ದುರ್ಗಾಪ್ಪ ಬೂದಿಹಾಳ, ಸಿನು ಹಿಪ್ಪರಗಿ, ಭಾಷಾ ಕಲಕೆರಿ ಇತರರು ಉಪಸ್ಥಿತರಿದ್ದರು.
