ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶಬರಿಕೊಳ್ಳ ದೇವಸ್ಥಾನಕ್ಕೆ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಐತಿಹಾಸಿಕ ಮತ್ತು ಧಾರ್ಮಿಕ ಪ್ರಸಿದ್ಧ ಸ್ಥಳವಾದ ಶಬರಿಕೊಳ್ಳವು ಮೂಲಭೂತ ಸೌಲಭ್ಯಗಳ ಕೊರತೆ ಎದುರಿಸುತ್ತಿದೆ. ಈ ಧಾರ್ಮಿಕ ಸ್ಥಳಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ದೊರಕಿಸಿ, ಅಭಿವೃದ್ಧಿ ಪಡಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿ ಚರ್ಚಿಸಿ ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಗುಬ್ಬಿ | ಎಡಿಜಿಪಿ ಚಂದ್ರಶೇಖರ್ ಅಮಾನತ್ತಿಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
ಈ ಸಂದರ್ಭದಲ್ಲಿ ರಾಮದುರ್ಗ ಮಂಡಲ ಅಧ್ಯಕ್ಷ ಡಾ. ಕೆ.ವಿ ಪಾಟೀಲ, ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ರಾಜೇಶ್ ಬೀಳಗಿ, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣ್ ಹೂಲಗೇರಿ, ಸಂಗನಗೌಡರ ಪಾಟೀಲ, ನಿಂಗಪ್ಪ ಮೆಳ್ಳಿಕೇರಿ, ಮಹಾದೇವಪ್ಪ ಮದಕಟ್ಟಿ, ಶ್ರೀಶೈಲ ಮಳ್ಳಿಕೇರಿ, ನಿಂಗಪ್ಪ ಮುಳ್ಳೂರ, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.