ಮಾನಸಿಕ ಅಸ್ವಸ್ಥರಾಗಿರುವ ಮಹಿಳೆಯೋರ್ವರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಮಕ್ತಲಪೇಟೆ ಗ್ರಾಮದಲ್ಲಿ ನಡೆದಿದೆ.
ಮಾನಸಿಕ ಅಸ್ವಸ್ಥ ಮಹಿಳೆ ಮಕ್ಕಳನ್ನು ಮುಟ್ಟಿದ ಕಾರಣಕ್ಕೆ ಬಡಾವಣೆ ನಿವಾಸಿಗಳು, ಮರಕ್ಕೆ ಕಟ್ಟಿ, ಹಿಂಸೆ ನೀಡಿದ್ದಲ್ಲದೇ, ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದೆ.
ಘಟನೆಯನ್ನು ಕಂಡ ಸ್ಥಳೀಯರು 112 ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪೊಲೀಸರು ಆಗಮಿಸಿ ಮಹಿಳೆಯನ್ನು ರಕ್ಷಣೆ ಮಾಡಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಬೆಳಗಾವಿ | ಕಳಸಾ-ಬಂಡೂರಿ ನಾಲಾ ಯೋಜನೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ
ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿರವಾರ ತಾಲೂಕು ವಡವಟ್ಟಿ ಗ್ರಾಮದ ಮಹಿಳೆ ಎಂದು ಗುರುತಿಸಲಾಗಿದೆ. ಕೂಡಲೇ ಮಹಿಳೆಯ ಕುಟುಂಬಸ್ಥರಿಗೆ ಸಂಪರ್ಕಿಸಿ ಠಾಣೆಗೆ ಕರೆಸಿ ಕಳುಹಿಸಿದ್ದಾರೆ. ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
