ಗದಗ | ನ್ಯಾಯಾಂಗದ ಮೂಲಕ ಪಂಚಮಸಾಲಿ ಮೀಸಲಾತಿ ಹೋರಾಟ: ಮೃತ್ಯುಂಜಯ ಸ್ವಾಮೀಜಿ

Date:

Advertisements

“ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಎಲ್ಲ ಸಚಿವರು, ಶಾಸಕರು ಮಾತನಾಡುತ್ತಿದ್ದರು. ಸಿಎಂ ಸಿದ್ದರಾಮಯ್ಯ ಅವರ ಎದುರು ಪಂಚಮಸಾಲಿ ಸಮಾಜದ ಸಚಿವರು, ಶಾಸಕರು ಮಾತನಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ ಮಕ್ಕಳಿಗೆ ನ್ಯಾಯ ಸಿಗಬೇಕು, ಶೈಕ್ಷಣಿಕವಾಗಿ, ಸರಕಾರಿ ಉದ್ಯೋಗಕ್ಕಾಗಿ, ಸಂವಿಧಾನಬದ್ಧ ಹಕ್ಕುಗಳಿಗಾಗಿ ಪಂಚಮಸಾಲಿ ಸಮಾಜದ ವಕೀಲರು ಹೋರಾಟ ನಡೆಸಿದ್ದಾರೆ” ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಗದಗ ಪಟ್ಟಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ವಿಧಾನಸಭೆಯಲ್ಲಿ ಸಚಿವರ, ಶಾಸಕರ ಧ್ವನಿ ಅಡಗಿದ ಕಾರಣ ನ್ಯಾಯಾಂಗದ ಮೂಲಕ ಹೋರಾಟ ಆರಂಭಿಸಲಾಗಿದೆ” ಎಂದರು.

ಸಿಎಂ ಸಿದ್ದರಾಮಯ್ಯ ಅವರು ಅ. 15ರಂದು ಪಂಚಮಸಾಲಿ ಸಮಾಜದ ಪ್ರಮುಖ ವಕೀಲರ ಸಭೆ ಕರೆದಿದ್ದಾರೆ. ಆದರೆ ಸಭೆಯ ಸಮಯ ಹಾಗೂ ನಿಗದಿಯಾಗಿಲ್ಲ. ಕೂಡಲೇ ಸಮಯ ಹಾಗೂ ಸ್ಥಳ ನಿಗದಿಗೊಳಿಸಬೇಕು ಎಂದು ತಿಳಿಸಿದರು.

Advertisements

10 ಜನ ವಕೀಲರೊಂದಿಗೆ ಸಮುದಾಯದ ಪ್ರಮುಖರು, ಪಂಚಮಸಾಲಿ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಭೆಯಲ್ಲಿ ಮೀಸಲಾತಿ ಹಾಗೂ ಅದರಿಂದ ಸಮಾಜಕ್ಕೆ ಉಂಟಾಗುವ ಅನುಕೂಲಗಳ ಕುರಿತು ಚರ್ಚಿಸಿ, ಮನವೊಲಿಸಲಾಗುವುದು. ಒಂದು ವೇಳೆ ಬೇರೆ ಬೇರೆ ಕಾರಣ, ನೆಪವೊಡ್ಡಿ ಸಭೆಯನ್ನು ಮೊಟಕುಗೊಳಿಸಿದ್ದಲ್ಲಿ ವಕೀಲರೊಂದಿಗೆ, ಸಮುದಾಯದ ಮುಖಂಡರು, ಹೋರಾಟಗಾರರು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಅ.8ರಂದು ನೆಲದನಿ ಬಳಗದಿಂದ ನಾಟಕ ಪ್ರದರ್ಶನ

ಸಿಎಂ ಸಿದ್ದರಾಮಯ್ಯ ಅವರು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುತ್ತಾರೆ ಎಂಬ ವಿಶ್ವಾಸವಿದೆ. ಇಲ್ಲವಾದಲ್ಲಿ ಸಮಾಜದ ಮುಖಂಡರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಜಾತಿ ಜನಗಣತಿ ಮಾಡುವ ಬಗ್ಗೆ ಎಲ್ಲೆಡೆ ಅಸಮಾಧಾನವಿದ್ದು, ವೈಜ್ಞಾನಿಕವಾಗಿ, ಸತ್ಯವನ್ನು ಆಧರಿಸಿ ಜಾತಿ ಜನಗಣತಿಯಾದರೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X