ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಿರ್ಮಾಣಗೊಂಡಿರುವ ಬೃಹತ್ ‘ಕಲಾ ಸಂಭ್ರಮ’ ವೇದಿಕೆಯಲ್ಲಿ ಇತಿಹಾಸ ಪ್ರಸಿದ್ದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, “ಈ ಬಾರಿಯ ದಸರಾ ಉತ್ಸವಕ್ಕೆ ರಾಜ್ಯ ಸರ್ಕಾರ 1.5 ಕೋಟಿ ರೂ ಹಾಗೂ ಗೋಣಿಕೊಪ್ಪ ದಸರಾಕ್ಕೆ 75 ಲಕ್ಷ ರೂ ಅನುದಾನ ನೀಡಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹಾಗೂ ಕೊಡಗು ಉಸ್ತುವಾರಿ ಸಚಿವ ಬೋಸರಾಜ್ ಅವರಿಗೆ ಕೊಡಗಿನ ಸಮಸ್ತ ಜನತೆಯ ಪರವಾಗಿ ಧನ್ಯವಾದ ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಬಸವಣ್ಣ; ಸಮಾಜೋಧಾರ್ಮಿಕ, ರಾಜಕೀಯ, ಆರ್ಥಿಕ ತತ್ವಗಳ…
ದಸರಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ವೆಂಕಟ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ,ಪೋಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ, ಎ ಸಿ ವಿನಾಯಕ್ ನರ್ವಾಡೆ, ಮೂಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.