ಮಂಡ್ಯ | ಯುವಜನರಿಗೆ ಗಾಂಧಿ ಚಿಂತನೆಯನ್ನು ತಿಳಿಸುವ ಅಗತ್ಯವಿದೆ: ಡಾ. ಬಿ.ಸಿ. ಬಸವರಾಜು

Date:

Advertisements

ದೇಶದ ಯುವ ಜನರಿಗೆ ಗಾಂಧಿ ಚಿಂತನೆಯನ್ನು ತಿಳಿಸುವುದು ಎಂದಿಗಿಂತ ಇಂದಿನ ತುರ್ತು ಆದ್ಯತೆಯಾಗಬೇಕು ಎಂದು ಈ ದಿನ.ಕಾಮ್ ವಿಡಿಯೋ ವಿಭಾಗದ ಮುಖ್ಯಸ್ಥ ಡಾ.ಬಿ.ಸಿ. ಬಸವರಾಜು ತಿಳಿಸಿದರು.

ಮಂಡ್ಯ ನಗರದ ಗಾಂಧಿ ಭವನದಲ್ಲಿ ಚಿತ್ರಕೂಟದ ವತಿಯಿಂದ ಭಾನುವಾರ ಸಂಜೆ ನಡೆದ ಹಾಡು, ಹಸೆ, ಕವಿತೆಗಳ ಜತೆ ಮಾತುಕತೆ ಎಂಬ ವಿಭಿನ್ನ ಕಾರ್ಯಕ್ರಮದಲ್ಲಿ ‘ಗಾಂಧಿ ಮತ್ತು ಮಾಧ್ಯಮ’ ಕುರಿತು ವಿಶೇಷ ಉಪನ್ಯಾಸ ನೀಡುತ್ತಾ ಅವರು ಮಾತನಾಡುತ್ತಿದ್ದರು.

“ಇಂದಿನ ಜನರಲ್ಲಿ ಗಾಂಧಿ ಚಿಂತನೆಯನ್ನು ಅರ್ಥ ಮಾಡಿಸುವ ಮನಸ್ಥಿತಿ ಕಡಿಮೆಯಾಗಿದೆ. ಒಂದು ವೇಳೆ ನಾವು ಗಾಂಧಿಯನ್ನು ತಿಳಿದುಕೊಳ್ಳಲು ವಿಫಲವಾದರೆ, ಈ ಒಕ್ಕೂಟವನ್ನು ಅವರ ಆಶಯದ ಭಾರತವನ್ನಾಗಿ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

Advertisements

ದೇಶ ವಿಭಜನೆಯ ಕಾರಣಕ್ಕಾಗಿ ಗಾಂಧಿಯನ್ನು ಕೊಲ್ಲಲಾಯಿತು ಎಂಬುದು ಸುಳ್ಳು. ನಿಜವಾಗಲೂ ಆಗಿನ ಸಂದರ್ಭದಲ್ಲಿ ಗಾಂಧಿಯವರ ವೈಚಾರಿಕ ಸಿದ್ದಾಂತಕ್ಕೆ ವಿರುದ್ದವಾದ ವರ್ಣಾಶ್ರಮ, ಮನುವಾದವನ್ನು ಪ್ರತಿಪಾದಿಸುತ್ತಿದ್ದ ಸಂಘ ಪರಿವಾರದ ಗುಂಪು ಅವರನ್ನು ಹತ್ಯೆ ಮಾಡಿತು. ಏಕೆಂದರೆ ಗಾಂಧಿಜೀಯವರು ಮನುವಾದಿಗಳ ಸಿದ್ದಾಂತಕ್ಕೆ ಎದುರಾಗಿದ್ದರು ಎಂದು ತಿಳಿಸಿದರು.

ಗಾಂಧಿ 11

ಪತ್ರಿಕೋದ್ಯಮವು ಸಮಾಜ ಸೇವೆಯಾಗಬೇಕೆಂದು ಗಾಂಧೀಜಿಯವರು ಬಯಸಿದ್ದರು. ಆದರೆ, ಈ ದೇಶದಲ್ಲಿ ಮಾಧ್ಯಮಗಳ ಸ್ಥಿತಿ ಏನಾಗಿದೆ ಎಂಬುದನ್ನು ಗಮನಿಸಿದರೆ, ಅವರು ಬಂಡವಾಳ ಶಾಹಿಗಳು ಹಾಗೂ ಉದ್ಯಮಿಗಳ ಕೈಯಲ್ಲಿ ಸಿಲುಕಿ, ಪತ್ರಕರ್ತರು ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿಗೆ ತಲುಪಿವೆ. ಇದು ಅಪಾಯಕಾರಿ ಬೆಳವಣಿಗೆ ಎಂದರು.

ಸಹ ಪ್ರಾಧ್ಯಾಪಕರಾದ ಡಾ. ಶಿಲ್ಪಶ್ರೀ ಹರವು ‘ಗಾಂಧೀ ಮತ್ತು ಗ್ರಾಮ’ ವಿಚಾರ ಕುರಿತು ಮಾತನಾಡಿ, ಗಾಂಧೀಜಿಯವರ ಸರ್ವೋದಯವೆಂದರೆ ಒಬ್ಬ ವ್ಯಕ್ತಿಯ ಹಿತ, ಎಲ್ಲರ ಹಿತದಲ್ಲಿದೆ ಎಂಬುದಾಗಿತ್ತು. ಅವರ ಸರ್ವೋದಯ ತತ್ವವು ಒಂದು ದೇಶಕ್ಕೆ ಮಾತ್ರ ಸೀಮಿತವಾಗಿರಲಿಲ್ಲ, ಇಡೀ ವಿಶ್ವಕ್ಕೆ ಸಂಬಂಧಿಸಿದ್ದಾಗಿತ್ತು ಎಂದರು.

ಇದನ್ನು ಓದಿದ್ದೀರಾ? ಬೀದರ್‌ | ತೊಗರಿ ಬೆಳೆ ಮಧ್ಯೆ ಗಾಂಜಾ ಬೆಳೆದ ರೈತ : 700 ಗಿಡ ಜಪ್ತಿ ಮಾಡಿದ ಪೊಲೀಸರು

ಶಿಕ್ಷಣ ತಜ್ಞ ವೋಡೇ ಪಿ.ಕೃಷ್ಣ ಸಮಾರಂಭ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರಂಗಾಯಣ ಮಾಜಿ ನಿರ್ದೇಶಕ ಸಿ. ಬಸವಲಿಂಗಯ್ಯ, ಲಂಕೇಶ್ ಪತ್ರಿಕೆ ಅಂಕಣಕಾರ ಬಿ. ಚಂದ್ರೇಗೌಡ, ನಾಟಕ ಅಕಾಡೆಮಿ ಮಾಜಿ ಸದಸ್ಯ ಮಲ್ಲಿಕಾರ್ಜುನ ಮಹಾಮನೆ ಭಾಗವಹಿಸಿದ್ದರು. ಹರವು ದೇವೇಗೌಡರು ಕಾರ್ಯಕ್ರಮದ ನಿರೂಪಣೆ ಮಾಡಿದರು.

ಮಂಡ್ಯ1 3
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X