ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರವಾಸಿಗರ ಬಸ್ ಏರಿದ ಚಿರತೆ

Date:

Advertisements

ಸಫಾರಿ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಏರಿದ್ದರಿಂದ ಕೆಲವರಿಗೆ ಆತಂಕವಾಗಿದ್ದು, ಕೆಲವರು ಕಿಟಕಿಯಲ್ಲಿ ಚಿರತೆ ನೋಡಿ ಖುಷಿ ಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ.

ಇತ್ತೀಚಿಗೆ ಆರಂಭವಾಗಿರುವ ಚಿರತೆ ಸಫಾರಿಯಲ್ಲಿ ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್‌ಗಳ ಮೇಲೆ ಹತ್ತುವ ವಾಡಿಕೆ ಮಾಡಿಕೊಂಡಿವೆ. ಅದೇ ರೀತಿ ಇಂದು ಸಹ ಒಂದು ಚಿರತೆ ಬಸ್ ಮೇಲೆ ಏರಿ ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಘರ್ಜಿಸಿದೆ. ನಂತರ ಚಾಲಕ ಬಸ್ ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಬಸ್‌ನಿಂದ ಕೆಳಕ್ಕೆ ಹಾರಿ ಹೋಗಿದೆ.

ಕಳೆದ ಮೂರು ತಿಂಗಳ ಹಿಂದೆ ಉದ್ಯಾನವನದ ಕರಡಿ, ಸಿಂಹ ಸಫಾರಿಗಳಿಗೆ ಹೊಂದಿಕೊಂಡಂತೆ ಇರುವ ವಿಶಾಲ ತೆರೆದ ಆವರಣದಲ್ಲಿ 19 ಚಿರತೆಗಳಿಗೆ ಆಶ್ರಯ ನೀಡಿ ಪ್ರತಿ ದಿನ ಒಂದೊಂದು ತಂಡವನ್ನು ಸಫಾರಿಗೆ ಬಿಡಲಾಗುತ್ತಿದೆ. ಸದ್ಯ ಚಿರತೆಗಳನ್ನು ಸಫಾರಿಯಲ್ಲಿ ನೋಡಿ ಖುಷಿ ಪಡುತ್ತಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

ಚಿರತೆಗಳು ಬುದ್ಧಿವಂತ ಪ್ರಾಣಿಗಳು ಚಿಕ್ಕ ಜಾಗ ಸಿಕ್ಕರೂ ನುಸುಳಿ ಬಿಡುತ್ತವೆ ಹಾಗಾಗಿ ಪ್ರವಾಸಿ ವಾಹನದಲ್ಲಿ ಕಿಟಕಿಯ ಗ್ಲಾಸ್‌ಗಳನ್ನು ಮುಚ್ಚಿರಬೇಕು. ಮಕ್ಕಳನ್ನು ಕಿಟಕಿ ಪಕ್ಕ ಕೂರಿಸಿದ್ದರೆ ಎಚ್ಚರಿಕೆಯಿಂದ ಇರುವಂತೆ ನೋಡಿಕೊಳ್ಳಬೇಕು. ಅದೇ ರೀತಿ ನಮ್ಮ ವಾಹನಗಳ ಚಾಲಕ ಮತ್ತು ಸಹಾಯಕ ಸಿಬ್ಬಂದಿಗಳಿಗೂ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಮಾಹಿತಿ ನೀಡಿದ್ದಾರೆ.

ಚಿರತೆಗಳು ನಾಚಿಕೆ ಸ್ವಭಾವದ ಪ್ರಾಣಿ. ಇವುಗಳಿಗೆ ಯಾವುದೇ ಅಪಾಯ ಇಲ್ಲ ಎಂಬುದು ಖಾತರಿಪಡಿಸಿಕೊಂಡ ಮೇಲೆಯೇ ನಡೆದು ಸಾಗುವುದು. ಹಾಗಾಗಿ ಪ್ರತಿ ದಿನ ವಾಹನಗಳನ್ನು ನೋಡಿ ಅಪಾಯವಿಲ್ಲ ಎಂಬುದು ಖಚಿತವಾಗಿದ್ದರಿಂದ ವಾಹನಗಳ ಬಳಿ ಬರುವುದು, ಮೇಲೆ ಏರುವುದು ವಾಡಿಕೆ ಮಾಡಿ ಕೊಂಡಿವೆ ಎಂದು ಅವರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X