ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಸಲ್ಲಿಸಲು ಮೇ 15 ಅಂತಿಮ ದಿನ

Date:

Advertisements
  • ಶೇ.80 ರಷ್ಟು ವಿಶೇಷ ಚೇತನ ವಿದ್ಯಾರ್ಥಿಗಳು ಉತ್ತೀರ್ಣ
  • ಉತ್ತರ ಪತ್ರಿಕೆಗಳ ಫೋಟೋ ಕಾಪಿ ಪಡೆಯಲು ಮೇ 14 ಕೊನೆಯ ದಿನ

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುವುದು. ಪೂರಕ ಪರೀಕ್ಷೆ ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳು ಮೇ 15ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶದ ಉತ್ತರ ಪತ್ರಿಕೆಗಳ ಛಾಯಾಪ್ರತಿ, ಮರುಎಣಿಕೆ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಹಾಗೂ ಪೂರಕ ಪರೀಕ್ಷೆಗೆ ನೋಂದಾಯಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದಿನಾಂಕ ಪ್ರಕಟಿಸಿದೆ.

“ಮರು ಮೌಲ್ಯಮಾಪನಕ್ಕೆ ಮೇ 15 ರಿಂದ ಮೇ 21ರವೆರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಫೋಟೋ ಕಾಪಿ ಪಡೆದುಕೊಳ್ಳಲು ಇಂದಿನಿಂದ ಮೇ 14 ರವರೆಗೆ ಅರ್ಜಿ ಸಲ್ಲಿಬಹುಬುದು ಎಂದು ಮಂಡಳಿ ಹೇಳಿದೆ.

Advertisements

ಶೇ.80 ರಷ್ಟು ವಿಶೇಷ ಚೇತನ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಶೇ. 80.6 ರಷ್ಟು ವಿಶೇಷ ಚೇತನ ವಿದ್ಯಾರ್ಥಿಗಳು ಪಾಸ್ ಆಗಿದ್ದರು.

ಈ ಸುದ್ದಿ ಓದಿದ್ದೀರಾ?: ಎಸ್ಸೆಸ್ಸೆಲ್ಸಿ ಫಲಿತಾಂಶ | ಶೇ.87.87ರಷ್ಟು ಬಾಲಕಿಯರು ಉತ್ತೀರ್ಣರು

ಕಳೆದ ಐದು ವರ್ಷದ ಫಲಿತಾಂಶ ಹೀಗಿದೆ

2018-19ನೇ ಸಾಲಿನಲ್ಲಿ ಶೇ.73.70 ಫಲಿತಾಂಶ ಬಂದಿತ್ತು. 2019-20ನೇ ಸಾಲಿನಲ್ಲಿ ಶೇ.71.80, 2020-21ರಲ್ಲಿ ಕೋವಿಡ್ ಉಲ್ಬಣಗೊಂಡು ದೇಶದಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿತ್ತು. ಈ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದೆ, ವಿದ್ಯಾರ್ಥಿಯ ಹಿಂದಿನ ತರಗತಿಯ ಅಂಕಗಳ ಆಧಾರ ಮೇಲೆ ಕೃಪಾಂಕ ನೀಡಿ ಉತ್ತೀರ್ಣರನ್ನಾಗಿ ಮಾಡಲಾಗಿತ್ತು. ಆ ವರ್ಷ ಶೇ.99.99ರಷ್ಟು ಫಲಿತಾಂಶವಿತ್ತು. ಕಳೆದ ವರ್ಷ 2021-22 ಶೇ.83.89 ಫಲಿತಾಂಶ ಬಂದಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X