ಗದಗ ಜಿಲ್ಲೆಯ ಕಪ್ಪತಗುಡ್ಡದ ಜೀವ ವೈವಿಧ್ಯತೆಯಲ್ಲಿ ಅಸಮತೋಲನ ಉಂಟಾಗಿದ್ದು, ಅದನ್ನು ಸರಿಪಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ವನ್ಯ ಜೀವಿ ಮಂಡಳಿ ಸಭೆ ಮಾಡಿದ್ದೆವು. ಸಭೆಯಲ್ಲಿ ನಿಸರ್ಗವನ್ನು ಕಾಪಾಡುವ ಕೆಲಸವನ್ನು ಮಾಡಬೇಕು ಎಂದು ಹೇಳಿದ್ದೆ ಎಂದು ನೆನಪಿಸಿದರು.
ಈ ಸುದ್ದೀ ಓದಿದ್ದೀರಾ? ಕಲಬುರಗಿ | ಜೀವ ಕಳೆದುಕೊಳ್ಳುವ ಹಂತದಲ್ಲಿದೆ ಐತಿಹಾಸಿಕ ಮಳಖೇಡ ಕೋಟೆ
ಈಗಲೂ ಕೂಡ, ಮುಖ್ಯಮಂತ್ರಿ ಕಪ್ಪತಗುಡ್ಡದ ಜೀವ ವೈವಿಧ್ಯತೆ ಕಾಪಾಡಲು ಗಣಿಗಾರಿಕೆಯಂತಹ ಚಟುವಟಿಕೆ ನಡೆಯಲು ಅವಕಾಶ ಕೊಡದೇ ಈ ಭಾಗದ ಮೂರುನಾಲ್ಕು ಜಿಲ್ಲೆಯ ಪರಿಸರ ಕಾಪಾಡುವ ತೀರ್ಮಾನ ಮಾಡಬೇಕೆಂದು ಹೇಳಿದರು.