ನೆರೆಮನೆಯ ಯುವಕನೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ಜಲಾಲ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. 21 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ. ಶಹ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಾಲಕಿಯು ತನ್ನ ಅಜ್ಜ-ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಆಕೆ ಒಬ್ಬಂಟಿಯಾಗಿರುವುದನ್ನು ಗಮನಿಸಿದ ಆರೋಪಿಯು ಮನೆಯೊಳಗೆ ಹೋಗಿ ಆಕೆಯ ಅತ್ಯಾಚಾರ ಎಸಗಿದ್ದಾನೆ ಎಂದು ಶಹ್ಪುರ ಪೊಲೀಸ್ ಠಾಣೆಯ ಅಧಿಕಾರಿ ಶಿವಲಾಲ್ ಮರ್ಕಾಮ್ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ: ಜಾನಿ ಮಾಸ್ಟರ್‌ಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು
ಬಾಲಕಿಯ ಅಜ್ಜಿ ಮನೆಯ ಹಿಂಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಮತ್ತು ತಾತಾ ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿ ಬಾಲಕಿ ಒಬ್ಬಳೇ ಇರುವುದನ್ನು ನೋಡಿದ ಯುವಕ ಈ ಕೃತ್ಯ ಎಸಗಿದ್ದಾನೆ. ನೆರೆಮನೆಯವರು ಗಾಯಗೊಂಡ ಬಾಲಕಿಯನ್ನು ನೋಡಿ ಅಜ್ಜಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.
ಬಾಲಕಿಯನ್ನು ಕೂಡಲೇ ಜಿಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದ್ದ ಕಾರಣ ಜಬಲ್ಪುರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
