ಯಲಹಂಕ ಬಳಿ 153 ಎಕರೆಯಲ್ಲಿ ‘ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ ನಿರ್ಮಾಣ: ಈಶ್ವರ ಖಂಡ್ರೆ

Date:

Advertisements

ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಒ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ‘ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಭವನದಲ್ಲಿ ಸೋಮವಾರ ನಡೆದ ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, “153 ಎಕರೆ ಅರಣ್ಯ ಭೂಮಿಯನ್ನು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಗುತ್ತಿಗೆ ನೀಡಲಾಗಿತ್ತು. ಈಗ ಗುತ್ತಿಗೆ ಅವಧಿ ಮುಗಿದಿದ್ದು, ಸಾಮಾಜಿಕ ಜವಾಬ್ದಾರಿ- ಇಲಾಖೆ ಮತ್ತು ಸಿ.ಎಸ್.ಆರ್ ನಿಧಿಯ ನೆರವಿನೊಂದಿಗೆ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಒಂದು ಸಸ್ಯೋದ್ಯಾನ ಮಾಡಲಾಗುವುದು” ಎಂದರು.

“ಯಲಹಂಕ ಸುತ್ತುಮುತ್ತ ಬೆಂಗಳೂರು ವ್ಯಾಪಕವಾಗಿ ಬೆಳೆದಿದೆ. ಈ ಹಿನ್ನೆಯಲ್ಲಿ ಜನರಿಗೆ ಅನುಕೂಲವಾಗುವಂತೆ ಇಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಸ್ಥಾಪಿಸಿದಲ್ಲಿ ಅದು ಅತ್ಯಂತ ಆಕರ್ಷಣೀಯ ತಾಣವಾಗುತ್ತದೆ” ಎಂದು ಹೇಳಿದರು.

Advertisements

“ಬೆಂಗಳೂರು ನಗರವು ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಭಾರತದ ಗಾರ್ಡನ್ ಸಿಟಿ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ. ಭಾರತೀಯ ಅರಣ್ಯ ಸಮೀಕ್ಷಾ ವರದಿಯಂತೆ ಬೆಂಗಳೂರು ನಗರವು ಭಾರತದಲ್ಲಿ ಮೂರನೇ ಅತಿ ಹೆಚ್ಚು ಭೂ ಪ್ರದೇಶವನ್ನು ಹೊಂದಿರುವ ನಗರವಾಗಿದ್ದು, ಸುಮಾರು 89 ಚದರ ಕಿಲೋಮೀಟರ್‌ನಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಬೆಂಗಳೂರಿನ ವೃಕ್ಷ ಹೊದಿಕೆ ಶೇ.6.81 ರಷ್ಟಿದೆ. ಕಳೆದ 10 ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ 5 ಚದರ ಕಿಲೋಮೀಟರ್‌ ನಷ್ಟು ಹಸಿರು ಹೊದಿಕೆ ಕಡಿಮೆಯಾಗಿದೆ” ಎಂದರು.

“ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಉದ್ಯಾನ ನಗರಿ ಎನ್ನುವ ಹೆಗ್ಗಳಿಕೆಯನ್ನು ಮರುಸ್ಥಾಪಿಸಲು ಇಲಾಖೆಯು ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಇನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ. ಜೊತೆಗೆ ರಾಜಧಾನಿಯಲ್ಲಿ ಒತ್ತುವರಿಯಾಗಿರುವ ಅರಣ್ಯಭೂಮಿಯನ್ನು ಮರಳಿ ವಶಕ್ಕೆ ಪಡೆಬೇಕಿದೆ” ಎಂದು ಈಶ್ವರ ಖಂಡ್ರೆ ಹೇಳಿದರು.

“ವನ್ಯ ಮೃಗಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಜನರಲ್ಲಿ ಅರಿವು ಮೂಡಿಸಲು ಮುಂದಿನ ಪೀಳಿಗೆಗೆ ವನ್ಯ ಮೃಗಗಳ ಮಹತ್ವ ತಿಳಿಸಲು ಪ್ರತಿವರ್ಷ ಅಕ್ಟೋಬರ್ 2ರಿಂದ 8ರವರೆಗೆ ವನ್ಯಜೀವಿ ಸಪ್ತಾಹ ಆಚರಿಸಲಾಗುತ್ತದೆ” ಎಂದು ತಿಳಿಸಿದರು.

ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್, ಮುಖ್ಯ ವನ್ಯ ಜೀವಿ ಪರಿಪಾಲಕರಾದ ಸುಭಾಷ್ ಮಾಲ್ಖಡೆ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X