ನವೆಂಬರ್ 1ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವವು ಆಚರಿಸುವ ಬಗ್ಗೆ ಜಿಲ್ಲಾಡಳಿತವು ಪೂರ್ವಭಾವಿ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಭಾಗವಹಿಸಲು ಸಂಘ-ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಆಹ್ವಾನ ನೀಡಿದ್ದಾರೆ.
ಅಕ್ಟೋಬರ್ 8ರ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇದನ್ನು ಓದಿದ್ದೀರಾ? ಹಾವೇರಿ | ಡಿ ಗ್ರೂಪ್ ನೌಕರರಿಗೆ ಸರಿಯಾದ ಸೌಲಭ್ಯ ಸಿಗುತ್ತಿಲ್ಲ: ಹುಲಗಪ್ಪ ಛಲವಾದಿ ಆರೋಪ
ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಜಿಲ್ಲೆಯ ಸಂಘ -ಸಂಸ್ಥೆಯ ಪ್ರತಿನಿಧಿಗಳು, ಆಸಕ್ತಿಯುಳ್ಳ ಸಾರ್ವಜನಿಕರು ಸಭೆಗೆ ಹಾಜರಾಗಿ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
