ಕೆಕೆಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಬೀದರ್-ಜಹೀರಾಬಾದ್ ಮುಖ್ಯ ಹೆದ್ದಾರಿಯ ಗಣೇಶಪುರ ಕ್ರಾಸ್ ಬಳಿ ಸೋಮವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ತಾಲೂಕಿನ ಗಣೇಶಪುರ ಗ್ರಾಮದ ಸಿದ್ರಾಮ (70), ಜಗನ್ನಾಥ (40) ರೇಣುಕಾ (36) ಮತ್ತು ವಿನಯಕುಮಾರ್ (14) ಮೃತರಾಗಿದ್ದು. ಪತಿ-ಪತ್ನಿ, ಮಗ ಹಾಗೂ ಮಾವ ನಾಲ್ಕು ಜನ ಒಂದೇ ಕುಟುಂಬದವರಾಗಿದ್ದಾರೆ ಎಂದು ತೆಲಂಗಾಣ ಪೊಲೀಸರು ಮಾಹಿತಿ ನೀಡಿದ್ದಾರೆ.
ಹೊಲದಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ ಬಸ್ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದು ಸಿದ್ರಾಮ ಎಂಬುವರನ್ನು ಜಹೀರಾಬಾದ್ ಪಟ್ಟಣದ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಬೀದರ್ ಜಿಲ್ಲೆಯ ಗಡಿ ಸಮೀಪದಲ್ಲೇ ಬರುವ ತೆಲಂಗಾಣದ ಗಣೇಶಪುರ ಬಳಿ ಘಟನೆ ನಡೆದಿದ್ದು, ಸ್ಥಳದಲ್ಲೇ ಸಾವಿಗೀಡಾದವರ ಮೃತದೇಹ ಬೀದರ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?
ಜಹೀರಾಬಾದ್ ತಾಲ್ಲೂಕಿನ ಹದನೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.