ಬಿಬಿಎಂಪಿ ವ್ಯಾಪ್ತಿಯಲ್ಲಿ ಗುಂಡಿ ಮುಚ್ಚಲು ₹7,300 ಕೋಟಿ ಖರ್ಚು, ಸಾವಿರಾರು ಕೋಟಿ ಭ್ರಷ್ಟಾಚಾರ: ಎಎಪಿ ಗಂಭೀರ ಆರೋಪ

Date:

Advertisements

ಕಳೆದ ಮೂರು ವರ್ಷದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು 7,300 ಕೋಟಿ ರೂ. ಖರ್ಚು ಮಾಡಲಾಗಿದೆ, ರಸ್ತೆ ಗುಂಡಿ ಮುಚ್ಚುವ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿ, ಜೆಡಿಎಸ್ ಅಥವಾ ಕಾಂಗ್ರೆಸ್ ಸರ್ಕಾರಗಳು ಅಧಿಕಾರಕ್ಕೆ ಬಂದರೂ ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿಲ್ಲ. ರಸ್ತೆ ಗುಂಡಿ ಮುಚ್ಚುವ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಲಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಬಿಎಂಪಿ ಕಮಿಷನರ್ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ ಎಂದು ಹೇಳಿದ್ದರು. ಆದರೆ ಈವರೆಗೂ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸವೇ ಆಗಿಲ್ಲ” ಎಂದರು.

“ಬ್ರ್ಯಾಂಡ್‌ ಬೆಂಗಳೂರು ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡುತ್ತಿರುವುದು ಕಮಿಷನ್ ದಂಧೆಯಾಗಿದೆ. ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆ ಗುಂಡಿಗಳು ಇರುವ ಕಡೆ ಆಮ್ ಆದ್ಮಿ ಪಕ್ಷದ ವತಿಯಿಂದ ಜನಾಂದೋಲನ ಮಾಡಲು ನಿರ್ಧರಿಸಲಾಗಿದೆ” ಎಂದು ಮೋಹನ್‌ ದಾಸರಿ ತಿಳಿಸಿದರು.

Advertisements

“ಬಿಬಿಎಂಪಿ ಚುನಾವಣೆ ನಡೆಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಛೀಮಾರಿ ಹಾಕಿದ್ದರೂ ಭಂಡ ಸರ್ಕಾರ, ಚುನಾವಣೆ ನಡೆಸಲು ಮುಂದಾಗಿಲ್ಲ. ಕಾರ್ಪೊರೇಟರ್‌ಗಳು ಇಲ್ಲದೆ ಜನರ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ಶಾಸಕರೇ ಬಿಬಿಎಂಪಿ ಚುನಾವಣೆ ನಡೆಸಲು ಅಡ್ಡಿಯಾಗಿದ್ದಾರೆ, ಬಿಜೆಪಿ ಬೇಕೆಂದೆ ಬಿಬಿಎಂಪಿ ಚುನಾವಣೆ ಮುಂದೂಡಿತ್ತು, ಇದೀಗ ಕಾಂಗ್ರೆಸ್ ಕೂಡ ಅದನ್ನೇ ಮಾಡುತ್ತಿದೆ. ಕೂಡಲೇ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಕ್ರಮ ತೆಗೆದುಕೊಳ್ಳಬೇಕು” ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಒತ್ತಾಯಿಸಿದರು.

“ಮಳೆ ಬಂದರೆ ಬಿಬಿಎಂಪಿ ಅಧಿಕಾರಿಗಳು, ಸರ್ಕಾರದ ಬಣ್ಣ ಬಯಲಾಗುತ್ತದೆ. ಬೆಳ್ಳಂದೂರು ಔಟರ್ ರಿಂಗ್ ರೋಡ್‌ ನೋಡಿದರೆ ರಸ್ತೆಗಳ ಗುಣಮಟ್ಟ ಯಾವ ಮಟ್ಟದಲ್ಲಿದೆ ಎನ್ನುವುದು ಗೊತ್ತಾಗುತ್ತದೆ. ರಸ್ತೆ ಗುಂಡಿಗಳಿಂದ ಕೂಡ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಮಹದೇವಪುರ ವ್ಯಾಪ್ತಿಯಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹವಾದರೂ, ಕಾಟಾಚಾರಕ್ಕೆ ರಸ್ತೆ ನಿರ್ಮಾಣ ಮಾಡಿ, ಜನರ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ” ಎಂದು ಪಕ್ಷದ ಬೆಂಗಳೂರು ಉಪಾಧ್ಯಕ್ಷ ಅಶೋಕ್ ಮೃತ್ಯುಂಜಯ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಯುವ ಘಟಕದ ಅಧ್ಯಕ್ಷ ಉಮೇಶ್ ಪಿಳ್ಳೆ ಗೌಡ ಹಾಗೂ ಆಟೋ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X