ಜಮ್ಮು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಕಣಿವೆ ರಾಜ್ಯದಲ್ಲಿ ಕಾಂಗ್ರೆಸ್ – ಎನ್‌ಸಿ ಮೈತ್ರಿಕೂಟ ಮುಂದಿದ್ದರೆ, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
90 ಕ್ಷೇತ್ರಗಳ ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಸಾರಥ್ಯದ ಮೈತ್ರಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುತ್ತಿದೆ. ಸುಮಾರು 39 ಸ್ಥಾನಗಳನ್ನು ನ್ಯಾಷನಲ್ ಕಾನ್ಫರೆನ್ಸ್ ಗಳಿಸಬಹುದಾಗಿದ್ದು, ಎರಡನೇ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರ ಹೊಮ್ಮಿದೆ. ನ್ಯಾಷನಲ್ ಕಾನ್ಫರೆನ್ಸ್‌ನ ಮಿತ್ರ ಪಕ್ಷ ಕಾಂಗ್ರೆಸ್ 10 ಸ್ಥಾನಗಳಲ್ಲಿ ಗೆಲ್ಲಬಹುದಾಗಿದ್ದು, ಎನ್‌ಸಿ – ಕಾಂಗ್ರೆಸ್ ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ.
ಬಿಜೆಪಿಗೆ 26 ಸ್ಥಾನಗಳು ಸಿಗುವ ಸಾಧ್ಯತೆ ಇದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಪಿಡಿಪಿ ಪಕ್ಷದ ಜೊತೆಗೂ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಕೂಡಾ ದಟ್ಟವಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?
ಹರಿಯಾಣದಲ್ಲಿ ಬಿಜೆಪಿ ಮುಂದೆ
ಒಟ್ಟು 90 ಕ್ಷೇತ್ರಗಳ ಹರಿಯಾಣದಲ್ಲಿ ಬಿಜೆಪಿ 49, ಕಾಂಗ್ರೆಸ್ 35 ಐಎನ್‌ಎಲ್‌ಡಿ 2 ಮತ್ತು ಇತರರು 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
