ಹರಿಯಾಣದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಗದ್ದುಗೆಯನ್ನು ಏರಲು ಸಿದ್ಧತೆ ನಡೆಸುತ್ತಿದೆ. 49 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಹರಿಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ನಿವಾಸದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚನೆ ಬಗ್ಗೆ ಚರ್ಚೆಗಾಗಿ ಸಭೆಯನ್ನು ಸೇರಿದೆ ಎಂದು ವರದಿಯಾಗಿದೆ.
ಮಧ್ಯಾಹ್ನ 12.55ರ ಹೊತ್ತಿಗೆ ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 49ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 34ರಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 55 ಸ್ಥಾನಗಳು ಗೆಲ್ಲುತ್ತದೆ ಮತ್ತು ಬಿಜೆಪಿ 26 ಕ್ಷೇತ್ರದಲ್ಲಿ ಗೆಲ್ಲುತ್ತದೆ ಎಂದು ಏಳು ಎಕ್ಸಿಟ್ ಪೋಲ್‌ಗಳು ಹೇಳಿದ್ದವು.
ಇದನ್ನು ಓದಿದ್ದೀರಾ? ಹರಿಯಾಣ ವಿಧಾನಸಭೆ ಚುನಾವಣೆ: ಬಿಜೆಪಿ ಮುನ್ನಡೆಗೆ ಆಪ್ ಕಾರಣವಾಯಿತೆ?
ಮತ ಎಣಿಕೆ ಆರಂಭವಾಗುವ ಮುನ್ನವೇ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಹರಿಯಾಣದಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೀಗ ಸರ್ಕಾರ ರಚನೆಗೆ ಸಿದ್ಧತೆ ನಡಸುತ್ತಿದ್ದಾರೆ.
ಬಿಜೆಪಿಯ ಹಿರಿಯ ನಾಯಕರು ಸರ್ಕಾರ ರಚನೆಯ ಕುರಿತು ಚರ್ಚಿಸಲು ನವದೆಹಲಿಯಲ್ಲಿರುವ ಮನೋಹರ್ ಲಾಲ್ ಖಟ್ಟರ್ ಅವರ ನಿವಾಸದಲ್ಲಿ ಜಮಾಯಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಹರಿಯಾಣ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ಕೂಡಾ ಸಭೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
VIDEO | Haryana election results 2024: Union Minister Dharmendra Pradhan (@dpradhanbjp) arrives at the residence of Union Minister Manohar Lal Khattar (@mlkhattar) as BJP eyes victory in the state.#HaryanaElectionResults pic.twitter.com/X2Buev3FD2
— Press Trust of India (@PTI_News) October 8, 2024
