ಕಲಬುರಗಿ | ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ಅನುದಾನ ನೀಡುವಂತೆ ಒತ್ತಾಯ

Date:

Advertisements

ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸಿ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಮಾಡಬೇಕೆಂದು ಭಾರತಿಯ ಬೌದ್ಧ ಮಹಾಸಭಾ ಜೇವರ್ಗಿ ತಾಲೂಕು ಸಮಿತಿಯಿಂದ ಆಗ್ರಹಿಸಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕು ದಂಡಾಧಿಕಾರಿಗೆ ಮನವಿ ನೀಡಿದ ಕಾರ್ಯಕರ್ತರು ಮಾತನಾಡಿ, “ಚಿತ್ತಾಪುರ ತಾಲೂಕಿನ ಸನ್ನತಿ(ಕನಗನಹಳ್ಳಿ) ಗ್ರಾಮದಲ್ಲಿ ಒಂದು ಮತ್ತು ಮೂರನೇ ಶತಮಾನದ ಶಾಸನಗಳು ದೊರಕಿವೆ. ಸಾಮ್ರಾಟ ಅಶೋಕ ಚಕ್ರವರ್ತಿ ಸಿಂಹಾಸನದ ಮೇಲೆ ಕುಳಿತ ಭಂಗಿ ಮತ್ತು ಅವರ ಪರಿವಾರದ ಶಿಲೆಗಳು ಹಾಗೂ ಐತಿಹಾಸಿಕ ಕುರುಹುಗಳು, ಪಾಳಿ, ಬ್ರಾಹ್ಮಿ ಭಾಷೆಗಳಲ್ಲಿ ಶಾಸನಗಳು ದೊರೆತ್ತಿದ್ದು, ಇವುಗಳ ರಕ್ಷಣೆ ಕಾರ್ಯವಾಗಬೇಕಾಗಿದೆ. ಈಗಾಗಲೇ ಕೋಟಿ ರೂಪಾಯಿ ವೆಚ್ಚದಲ್ಲಿ ಬೌದ್ಧ ವಾಸ್ತು ಶೈಲಿಯ ಮ್ಯೂಸಿಯಂ ಮತ್ತು ಗ್ರಂಥಾಲಯವನ್ನು ನಿರ್ಮಿಸಲಾಗಿದೆ. ಅದರಂತೆ ಅನೇಕ ಕಟ್ಟಡಗಳನ್ನು ಕಟ್ಟಲಾಗಿದ್ದು, ಸ್ವಾಧೀನಪಡಿಸಿಕೊಂಡು ಉದ್ಘಾಟಿಸಬೇಕು” ಎಂದು ಆಗ್ರಹಿಸಿದರು.

“ಕರ್ನಾಟಕದಲ್ಲಿರುವ ಪ್ರಮುಖ ಬೌದ್ಧ ಅವಶೇಷಗಳನ್ನ ಸನ್ನತಿಯ ಬೌದ್ಧ ವಸ್ತುಸಂಗ್ರಹಾಲಯದಲ್ಲಿ ಸಂಗ್ರಹಿಸಬೇಕು. ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದರೂ ಅಭಿವೃದ್ಧಿ ಶೂನ್ಯವಾಗಿದೆ. ಇದರ ಜತೆಗೆ ರಚನೆಯಾದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಗಳಿಗೆ ಸರ್ಕಾರ ನೂರಾರು ಕೋಟಿ ರೂಪಾಯಿ ಬಿಡುಗಡೆ ಮಾಡಿ ಅಭಿವೃದ್ದಿ ಮಾಡಿದೆ. ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಾತ್ರ ಸರ್ಕಾರ ತಾರತಮ್ಯ ಧೋರಣೆ ತೋರಿದೆ”‌ ಎಂದು ಆರೋಪಿಸಿದರು.

Advertisements

“ಕಲಬುರಗಿ ವಸ್ತು ಸಂಗ್ರಹಾಲಯ ಸೇರಿದಂತೆ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿ, ಅಭಿವೃದ್ಧಿಪಡಿಸಿ ಅಂತಾರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿಸಬೇಕು” ಎಂದು ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಾಡುನುಡಿ ಸಂಸ್ಕೃತಿ ಬಿಂಬಿಸುವಂತಹ ನಾಡಹಬ್ಬ ದಸರಾ: ಕರಿಯಪ್ಪ ಅರಳಿಕಟ್ಟಿ

ಸೂರ್ಯಕಾಂತ ನಿಂಬಾಳಕರ್, ರಾಜು ಕಪನೂರ, ಎಸ್ ಎಸ್ ತಾವಡೆ, ದಿನೇಶ್‌ ದೊಡ್ಡಮನಿ, ಸಂತೋಷ ಮೇಲಿನಮನಿ, ಮರೆಪ್ಪ ಬಡಿಗೇರ, ಶಾಂತಪ್ಪ ಕೂಡಲಗಿ, ಸುಭಾಷ್ ಚನ್ನೂರ, ಗುರಣ್ಣ ಬಡಿಗೇರ‌ ಐನಾಪೂರ, ತಾಲೂಕು ಅಧ್ಯಕ್ಷ ಮಲ್ಲಣ್ಣ ಕೊಡಚಿ, ಪ್ರಧಾನ ಕಾರ್ಯದರ್ಶಿ ಶರಣಪ್ಪ ಬಡಿಗೇರ, ಉಪಾದ್ಯಕ್ಷ ರಾಜಶೇಖರ ಶಿಲ್ಪಿ, ಮಿಲಿಂದ ಸಾಗರ, ಸಿದ್ದು ಕೆರೂರ, ಭೀಮರಾಯ ನಗನೂರ, ಹರಿಚ್ಚಂದ್ರ ಕೊಡಚಿ, ಶಿವಶರಣ ಮಾರಡಗಿ, ರವಿ ಕೂಳಗೇರಿ, ಸಿದ್ರಾಮ ಕಟ್ಟಿ, ಶ್ರೀಹರಿ ಕರಕಳ್ಳಿ, ಸಿದ್ದು ಶರ್ಮಾ, ಯಶವಂತ ಬಡಿಗೇರ, ಸಂತೋಷ ಚನ್ನೂರ, ಸುನಿಲ್ ಚನ್ನೂರ, ಪ್ರಸನ್ ಸಿಂಗೆ, ವಿಶ್ವ ಆಲೂರ, ಸುನೀಲ್ ಬಡಿಗೇರ ಸೇರಿದಂತೆ ಇತರರು ಇದ್ದರು.

ವರದಿ: ವಾಲೆಂಟಿಯರ್- ಮಿಲಿಂದ್ ಸಾಗರ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X