ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಕುಮತಿ ಗ್ರಾಮದ ಸಾಗರ್ (14), ಗುರು (14), ವಿನಯ (11) ಮೃತ ಯುವಕರು. ಇವರಲ್ಲಿ ಇಬ್ಬರು ಸಹೋದರರಾಗಿದ್ದಾರೆ, ಓರ್ವ ಬಾಲಕ ಅವರ ಸ್ನೇಹಿತನಾಗಿದ್ದಾನೆ. ಮೂವರು ಎಂಟನೇ ತರಗತಿಯಲ್ಲಿ ಓದುತ್ತಿದ್ದರು ಎಂದು ತಿಳಿದು ಬಂದಿದೆ.
ಕಾನಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಜರುಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.