ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಬೇಕು ಹಾಗೂ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ಮಾಸಿಕ ಗೌರವ ಧನ ಕೇವಲ ರೂ12,000. ಅದೂ ಮೂರು ತಿಂಗಳಿಗೆ ಅಥವಾ ನಾಲ್ಕು ತಿಂಗಳಿಗೊಮ್ಮೆಯೂ ಗೌರವಧನ ಸಿಗುತ್ತಿದೆ. ಗೌರವಧನವನ್ನು ಹೆಚ್ಚಿಸಲು ಜಿಲ್ಲೆಯ ಉಪನ್ಯಾಸಕರ ಪರವಾಗಿ ನಿರ್ದೇಶಕರಿಗೆ ಹಾಗೂ ಸರ್ಕಾರಕ್ಕೆ ಶಿಫಾರಸ್ಸು ನೀಡಬೇಕೆಂದು ಮನವಿ ಮಾಡಿದರು.
ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿಥಿ ಉಪನ್ಯಾಸಕರನ್ನು ವಾರದ ಆರು ದಿನವೂ ದುಡಿಸಿಕೊಳ್ಳುತ್ತಿರುವುದು ಮತ್ತು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೂ ಸೇವೆ ಸಲ್ಲಿಸಲು ಒತ್ತಡ ಹಾಕುತ್ತಿರುವುದು ಕಂಡು ಬರುತ್ತಿದೆ. ಸರ್ಕಾರದಿಂದ ಗೌರವಧನ ಬಿಡುಗಡೆಯಾದ ತಕ್ಷಣವೇ, ವಾರದ ಒಳಗೆ ಉಪನ್ಯಾಸಕರಿಗೆ ಗೌರವಧನ ಸಿಗುವಂತೆ ಕ್ರಮ ಕೈಗೊಳ್ಳಬೇಕು. ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಜಿಲ್ಲೆಯ ಎಲ್ಲಾ ಅತಿಥಿ ಉಪನ್ಯಾಸಕರನ್ನು ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಜಿಲ್ಲೆಯ ಕಾಲೇಜುಗಳಿಗೆ ಸ್ಪಷ್ಟ ಆದೇಶ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಬೆಳಗಾವಿ | ಕಿತ್ತೂರು ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ: ಬಾಬಾಸಾಹೇಬ ಪಾಟೀಲ್
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.