ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ ಎಂದು ವಸತಿ ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಕಾಂಗ್ರೆಸ್ ಹೇಳಬೇಕು. ವಿಜಯೇಂದ್ರ ಕಾಂಗ್ರೆಸ್ ನ ಹೈಕಮಾಂಡಾ? ಎಂದು ವಾಗ್ದಾಳಿ ನಡೆಸಿದರು. ನಮ್ಮ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿಯವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿದ್ದೇವೆ ಎಂದು ಹೇಳಿದ್ದಾರೆ ಎಂದರು.
ಬಹಿರಂಗ ಕಾರ್ಯಕ್ರಮದಲ್ಲಿ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿಯೇ ಮುಂದಿನ ಸಿ.ಎಂ ಘೋಷಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಭಿಮಾನಿಗಳು ಕೂಗಿದ ತಕ್ಷಣ ಸಿ.ಎಂ ಆಗಲು ಸಾಧ್ಯವಿಲ್ಲ. ನನ್ನ ಅಭಿಮಾನಿಗಳು ಕೂಗುತ್ತಾರೆ. ನಾನು ಸಿ.ಎಂ ಆಗಿ ಬಿಡ್ತಿನಾ? ಎಂದು ಗುಡುಗಿದರು.