ಮಹಾತ್ಮ ಗಾಂಧೀಜಿ ಹೇಳಿಕೆ ಉಲ್ಲೇಖಿಸಿ ಇಸ್ರೇಲ್‌ಗೆ ತಿರುಗೇಟು ನೀಡಿದ ಲೆಬನಾನ್ ರಾಯಭಾರಿ

Date:

Advertisements

ಮಹಾತ್ಮ ಗಾಂಧೀಜಿ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಭಾರತದಲ್ಲಿನ ಲೆಬನಾನ್ ರಾಯಭಾರಿ ರಾಬಿ ನಾರ್ಶ್ , ‘ನೀವು ಕ್ರಾಂತಿವಾದಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನಲ್ಲ’ ಎಂದು ಇಸ್ರೇಲ್‌ಗೆ ತಿರುಗೇಟು ನೀಡಿದ್ದಾರೆ.

ನಾನು ಮಹಾತ್ಮ ಗಾಂಧೀಜಿ ಅವರ ಹೇಳಿಕೆಯನ್ನು ನೆನಪಿಸಲು ಬಯಸುತ್ತೇನೆ. ನೀವು ಕ್ರಾಂತಿವಾದಿಯನ್ನು ಕೊಲ್ಲಬಹುದು. ಆದರೆ ಕ್ರಾಂತಿಯನ್ನಲ್ಲ. ನೀವು ಹಿಜ್ಜುಲ್ಲಾ ನಾಯಕರನ್ನು ನಿರ್ಮೂಲನೆ ಮಾಡಬಹುದು. ಆದರೆ ಹಿಜ್ಜುಲ್ಲಾವನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಏಕೆಂದರೆ ಹಿಜ್ಜುಲ್ಲಾ ಅಲ್ಲಿ ನೆಲೆನಿಂತಿರುವ ಜನರಾಗಿದ್ದಾರೆ. ಹಿಜ್ಜುಲ್ಲಾ ಜನರಿಂದ ಬೆಂಬಲಿತ ಕಾನೂನುಬದ್ಧ ರಾಜಕೀಯ ಪಕ್ಷವಾಗಿದೆ. ಪ್ಯಾರಾಚೂಟ್‌ನಲ್ಲಿ ಬಂದ ಕಾಲ್ಪನಿಕ ರಚನೆಯಲ್ಲ’ ಎಂದು ಪಿಟಿಐಗೆ ನೀಡಿದ ವಿಡಿಯೊ ಸಂದರ್ಶನದಲ್ಲಿ ತಿಳಿಸಿದ್ದಾರೆ.

‘ಇಸ್ರೇಲ್‌ನಿಂದ ಹಿಬ್ಬುಲ್ಲಾವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಅಲ್ಲದೆ ಇಸ್ರೇಲ್‌ನ ಕ್ರೂರತೆಯ ವಿರುದ್ಧ ಹಿಬ್ಬುಲ್ಲಾ ಯಶಸ್ಸು ಗಳಿಸಲಿದೆ’ ಎಂದು ಅವರು ಹೇಳಿದ್ದಾರೆ.

Advertisements

1985ರಲ್ಲಿ ಲೆಬನಾನಿನಲ್ಲಿ ಇಸ್ರೇಲ್ ಆಕ್ರಮಣದ ವಿರುದ್ಧ ಹಿಜ್ಜುಲ್ಲಾ ಸಂಘಟನೆ ಅಸ್ತಿತ್ವಕ್ಕೆ ಬಂದಿತ್ತು.

‘ಲೆಬನಾನ್‌ನಲ್ಲಿ ಸ್ಥಾಪಿತ ರಾಜಕೀಯ ವ್ಯವಸ್ಥೆಯಡಿಯಲ್ಲಿ ಹಿಜ್ಜುಲ್ಲಾ ಕಾರ್ಯನಿರ್ವಹಿಸುತ್ತದೆ. ಅದೊಂದು ರಾಜಕೀಯ ಪಕ್ಷವಾಗಿದ್ದು, ಕ್ಯಾಬಿನೆಟ್ ಮತ್ತು ಸಂಸತ್ತಿನಲ್ಲೂ ಪ್ರತಿನಿಧಿಸುತ್ತದೆ. ಸಶಸ್ತ್ರ ವಿಭಾಗವನ್ನು ಹಿಬ್ಬುಲ್ಲಾ ಹೊಂದಿದೆ’ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಶಯ ಪರಿಹರಿಸಿ, ನ್ಯಾಯಾಂಗದ ಘನತೆ ಎತ್ತಿ ಹಿಡಿದ ನ್ಯಾಯಮೂರ್ತಿ

‘ಇಸ್ರೇಲ್ ನಡೆಸಿದ ದಾಳಿಯಲ್ಲಿ ಲೆಬನಾನಿನಲ್ಲಿ 2.100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, 11 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 2.2 ಮಿಲಿಯನ್‌ಗೂ ಹೆಚ್ಚು ಮಂದಿ ಸ್ಥಳಾಂತರಗೊಂಡಿದ್ದಾರೆ. ಪರಿಣಾಮ ಭೀಕರ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಭಾರತದಿಂದ ಔಷಧಗಳನ್ನು ಒಳಗೊಂಡಂತೆ ಲೆಬನಾನಿಗೆ ವೈದ್ಯಕೀಯ ನೆರವನ್ನು ರವಾನಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ ನಿರ್ಣಯಗಳನ್ನು ಪಾಲಿಸುವಂತೆ ಇಸ್ರೇಲ್ ಮೇಲೆ ಹೆಚ್ಚಿನ ಒತ್ತಡ ಹೇರುವಂತೆ ಭಾರತ ಸೇರಿದಂತೆ ಜಾಗತಿಕ ರಾಷ್ಟ್ರಗಳಿಗೆ ರಾಬಿ ನಾರ್ಶ್ ವಿನಂತಿಸಿದ್ದಾರೆ.

‘ನೆತನ್ಯಾಹು ತಮ್ಮ ನಿಯಂತ್ರಣವನ್ನು ಕಳೆದುಕೊಂಡಿದ್ದಾರೆ. ವಿನಾಶದ ಅಮಲಿನಲ್ಲಿದ್ದಾರೆ. ಯಾರಾದರೂ ಅವರನ್ನು ತಡೆಯಬೇಕು’ ಎಂದು ಹೇಳಿದ್ದಾರೆ.

‘ಗಾಜಾದಂತಹ ವಿನಾಶಕಾರಿ ಸ್ಥಿತಿ ಎದುರಾಗುವ ಮುನ್ನ ನಿಮಗೆ ಲೆಬನಾನ್ ಅನ್ನು ಉಳಿಸುವ ಅವಕಾಶವಿದೆ. ಯುದ್ಧವನ್ನು ಕೊನೆಗೊಳಿಸಲು ನಿಮ್ಮ ದೇಶವನ್ನು ಹಿಜ್ಜುಲ್ಲಾದಿಂದ ಮುಕ್ತಗೊಳಿಸಿ ಎಂದು ಲೆಬನಾನಿನ ಜನರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕರೆ ನೀಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X