ಬಿಗ್‌ಬಾಸ್‌ನಂತಹ ಕಾರ್ಯಕ್ರಮದಿಂದ ಸಮಾಜದ ಸಾಮರಸ್ಯ ಹದಗೆಡುತ್ತಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಜಗದ್ಗುರು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಸೊಪ್ಪನಹಳ್ಳಿ ಗ್ರಾಮದ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ ಸ್ವಸಹಾಯ ಸಂಘದಿಂದ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಕ್ಕೆ ಅರ್ಥಿಕ ನೆರವು ವಿತರಣೆ ಸಮಾರಂಭ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸ್ವಾಮೀಜಿ, ಬಿಗ್ ಬಾಸ್ ಎಂಬ ಕಾರ್ಯಕ್ರಮದಿಂದ ಪ್ರಸಕ್ತ ದಿನಮಾನದಲ್ಲಿ ದೃಶ್ಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪ್ರಭಾವದಿಂದ ಗ್ರಾಮೀಣ ಜನರಲ್ಲಿ ಸಂಸ್ಕಾರ ಕೊರತೆ ಕಾಡುತ್ತಿದೆ. ಜೊತೆಗೆ ಅರ್ಥವಿಲ್ಲದ ಬಿಗ್ ಬಾಸ್‌ನಂತಹ ಕಾರ್ಯಕ್ರಮಗಳ ನೋಡುತ್ತಾ ಜನ ಮಾನಸಿಕವಾಗಿ ಹಾಳಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಖಾಸಗಿ ವಾಹಿನಿಗಳು ಅಂತಹ ಕಾರ್ಯಕ್ರಮಗಳ ನಿರ್ಮಾಣದಿಂದ ದೂರ ಸರಿಯಬೇಕು.ಸ ಮಾಜದಲ್ಲಿ ಸಾಮರಸ್ಯ ಹಾಳಾಗುತ್ತಿದೆ. ಜನರ ಮನಸ್ಸಿನಲ್ಲಿ ಬೇಡದಂತಹ ಯೋಚನೆಗಳು ಸೃಷ್ಟಿಯಾಗುತ್ತದೆ. ರಾಜ್ಯದ ಜನರು ಅಂತಹ ಕಾರ್ಯಕ್ರಮಗಳ ವೀಕ್ಷಣೆಯಿಂದ ದೂರ ಉಳಿಯಬೇಕು ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಕಮಲಾಪುರ | ಬೌದ್ಧರ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ನೀಡಲು ಒತ್ತಾಯಿಸಿ ಮನವಿ
ಸಮಾಜಕ್ಕೆ ಸಂದೇಶ ನೀಡುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಸಮಾಜದ ಉನ್ನತಿಗೆ ಸುದ್ದಿ ಮತ್ತು ಮನೋರಂಜನಾ ವಾಹಿನಿಗಳು ಮುಂದಾಗಬೇಕು. ಆ ಮೂಲಕ ಸಮಾಜದಲ್ಲಿ ಬದಲಾವಣೆಗೆ ಕಾರಣರಾಗಬೇಕು ಎಂದು ಪುಷ್ಪಗಿರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ ಸ್ವಸಹಾಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
