ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆ ಮಾಡಿದೆ. ಮೇ.20, 21 ಮತ್ತುಇ 22 ರಂದು ಪರೀಕ್ಷೆಗಳು ನಡೆಯಲಿವೆ.
ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್ಗಳಿಗೆ ಮೇ 20 ರಿಂದ 22ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ.
ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಹೋಗಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
ಅಭ್ಯರ್ಥಿಗಳು ಸಿಇಟಿ ಸಂಬಂಧ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗಡಿನಾಡು ಮತ್ತು ಹೊರನಾಡು ಕನ್ನಡ ವಿದ್ಯಾರ್ಥಿಗಳಿಗೆ 22ರಂದು ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ?: ನೀಟ್ ಪರೀಕ್ಷೆ | ದಾಖಲೆ ಮಟ್ಟದಲ್ಲಿ ವಿದ್ಯಾರ್ಥಿಗಳು ಹಾಜರು