ಒಳ್ಳೆಯ ಕೆಲಸ ಮಾಡಿದ ಮಾತ್ರಕ್ಕೆ ನಾನೂ ಮುಖ್ಯಮಂತ್ರಿ ಕುರ್ಚಿ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೆನೆ ಎಂಬುದು ಸುಳ್ಳು ಎಂದು ಬೆಳಗಾವಿಯ ಕಿತ್ತೂರಿನಲ್ಲಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ ಅವರೆಲ್ಲ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಹಾಗಾಗಿ, ನಾಯಕರನ್ನು ಭೇಟಿ ಮಾಡಿ ಬರುವ ಸಚಿವರ ಬಗ್ಗೆ ತಪ್ಪು ಕಲ್ಪನೆ ಬೇಡ. ಒಂದುವೇಳೆ ಅವರು ಮುಖ್ಯಮಂತ್ರಿ ಆಗುವ ಉದ್ದೇಶದಿಂದಲೇ ಭೇಟಿ ನೀಡಿದ್ದರೂ ಅದರಲ್ಲಿ ತಪ್ಪೇನೂ ಇಲ್ಲ. ಸಿಎಂ ಆಗುವುದು ಅವರವರ ಇಷ್ಟ ಎಂದರು.
ಇದನ್ನು ಓದಿದ್ದೀರಾ? ಬೆಳಗಾವಿ | ಬ್ಯಾಂಕ್ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆ
ನಾನು ಒಳ್ಳೆಯ ಕೆಲಸ ಮಾಡುತ್ತೇನೆ ಎಂಬ ಕಾರಣಕ್ಕೆ ಜನ ಆರು ಬಾರಿ ಗೆಲ್ಲಿಸಿದ್ದಾರೆ. ಮೂರು ಬಾರಿ ಸಚಿವನಾಗಿ ವಿವಿಧ ಖಾತೆ ನಿರ್ವಹಿಸಿದ್ದೇನೆ. ಈಗಲೂ ನನಗೆ ಕೈತುಂಬ ಕೆಲಸವಿದೆ. 24 ಗಂಟೆ ಮಾತ್ರವಲ್ಲ; ದಿನಕ್ಕೆ 48 ಗಂಟೆ ಸಿಕ್ಕರೂ ಸಾಲುವುದಿಲ್ಲ. ಒಳ್ಳೆಯ ಕೆಲಸ ಮಾಡಿದ ಮಾತ್ರಕ್ಕೆ ನಾನೂ ಮುಖ್ಯಮಂತ್ರಿ ಕುರ್ಚಿ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೆನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ.