ಬಹಿರಂಗ ಪ್ರಚಾರಕ್ಕೆ ತೆರೆ | ದೇವ‍ಸ್ಥಾನ ಭೇಟಿ ಆರಂಭಿಸಿದ ರಾಜಕೀಯ ನಾಯಕರು

Date:

Advertisements
  • ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಡಿಕೆಶಿ ಸಿದ್ದರಾಮಯ್ಯ
  • ಹನುಮಾನ್ ಚಾಲೀಸ್ ಪಠಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದ ಬಳಿಕ ರಾಜಕೀಯ ನಾಯಕರುಗಳ ದೇವಸ್ಥಾನ ಭೇಟಿ ಆರಂಭಗೊಂಡಿದೆ. ಮತದಾರರ ಜೊತೆ ದೇವರಿಗೂ ಕೈ ಮುಗಿದು ಗೆಲುವಿನತ್ತ ತಮ್ಮನ್ನು ಮುನ್ನಡೆಸಲು ಸ್ಪರ್ಧಾಕಣದಲ್ಲಿರುವ ಅಭ್ಯರ್ಥಿಗಳು ಕೋರಿಕೊಳ್ಳುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು( ಮೇ9) ಬೆಂಗಳೂರಿನ ಕೆ ಆರ್ ಮಾರುಕಟ್ಟೆಯ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಪಕ್ಷಕ್ಕೆ ಪ್ರಚಂಡ ಬಹುಮತ ದೊರಕುವಂತೆ, ನಾಡಿನ ಜನರಿಗೆ ನೆಮ್ಮದಿ ಜೀವನ ಕಲ್ಪಿಸುವ ಸರ್ಕಾರ ರಚಿಸಲು ಅವಕಾಶ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾಗಿ ಹೇಳಿದರು.

ಇಲ್ಲಿಂದ ಮೈಸೂರಿಗೆ ತೆರಳಲಿದ ಶಿವಕುಮಾರ್ ಇಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ನಂತರ ಇಬ್ಬರೂ ನಾಯಕರೂ ಒಗ್ಗೂಡಿ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

Advertisements

ಮತ್ತೊಂದೆಡೆ ಬಿಜೆಪಿ ಪ್ರಮುಖರೂ ಇಂದು ಆಂಜನೇಯನ ಮೊರೆ ಹೋಗಿದ್ದರು. ಭಜರಂಗಿಗೆ ಕಾಂಗ್ರೆಸ್ ಅವಮಾನ ಮಾಡಿದೆ ಎನ್ನುವುದನ್ನೇ ಮುಂದಿಟ್ಟುಕೊಂಡು ಅದನ್ನೇ ತಮ್ಮ ಬಂಡವಾಳವನ್ನಾಗಿಸಿಕೊಂಡು ಮತದಾರರನ್ನು ಭಾವನಾತ್ಮಕವಾಗಿ ಸೆಳೆಯುವ ಪ್ರಯತ್ನವನ್ನು ಕಮಲ ಪಕ್ಷ ಮಾಡಿತು.ದೇವಸ್ಥಾನ

ಈ ಸುದ್ದಿ ಓದಿದ್ದೀರಾ?:ಚುನಾವಣಾ ಭದ್ರತೆಗೆ ಸಿದ್ಧವಾದ ಖಾಕಿಪಡೆ; 1.60 ಲಕ್ಷ ಪೊಲೀಸರಿಂದ ಪಹರೆ

ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆಯ “ಪ್ರಸನ್ನ ವೀರಾಂಜನೇಯ ದೇವಸ್ಥಾನ”ದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಗೋಪಾಲಯ್ಯ, ಸೇರಿದಂತೆ ಇತರರು ಪೂಜಾ ಕಾರ್ಯಕ್ರಮ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಹಿಂದೂಗಳ ಭಾವನೆಯನ್ನು ಕೆಣಕಿದೆ. ರಾಜಕೀಯಕ್ಕಾಗಿ ಧರ್ಮಕ್ಕೆ ಅಪಮಾನ ಮಾಡಿದೆ ಎಂದು ಕಿಡಿಕಾರಿದರು.

ಮತ್ತೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯ ವಿಜಯನಗರದಲ್ಲಿರುವ ಕೆಂಪಣ್ಣನವರ ಕಲ್ಯಾಣ ಮಂಟಪದ ಆವರಣದಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಹನುಮಾನ ಚಾಲೀಸ್ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X