ಉಡುಪಿ | ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

Date:

Advertisements

14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಲ್ಪೆ ಬಂದರಿನಲ್ಲಿ ಬೆಳಗಿನ ಜಾವ ನಡೆಯುವ ಮೀನಿನ ಹರಾಜು ಕೇಂದ್ರಗಳಲ್ಲಿ ಮಕ್ಕಳು ಮೀನು ಹೆಕ್ಕುವ ಕಾರ್ಯದಲ್ಲಿ ತೊಡಗುತ್ತಿದ್ದಾರೆ. ಈ ಹಿಂದೆ ದಾಳಿ ನಡೆಸಿದರೂ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಕಾರ್ಯಪಡೆಯ ಸದಸ್ಯರುಗಳು ಆಗಿಂದಾಗ್ಗೆ ನಿರಂತರ ಅನಿರೀಕ್ಷಿತ ದಾಳಿ ಹಾಗೂ ಭೇಟಿಗಳನ್ನು ಮಾಡುವುದರೊಂದಿಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಸೂಚನೆ ನೀಡಿದರು.

Advertisements

ಬಾಲ ಕಾರ್ಮಿಕತೆ ಮಕ್ಕಳ ಬಾಲ್ಯ, ಅವರ ಸಾಮರ್ಥ್ಯ, ಘನತೆ ಕಸಿದುಕೊಳ್ಳುವ ಹಾಗೂ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ನೈತಿಕವಾಗಿ ಹಾನಿಕಾರವಾಗುತ್ತದೆ. ಆದ್ದರಿಂದ ಅವರುಗಳು ಶಿಕ್ಷಣವಂತರಾಗಬೇಕು. ಉತ್ತಮ ವಿದ್ಯಾವಂತರಾಗಿ ಭವಿಷ್ಯ ರೂಪಿಸಿಕೊಳ್ಳಬೇಕು. ಆದರೆ ವಿವಿಧ ಕಾರಣಗಳಿಂದಾಗಿ ಮಕ್ಕಳು ಶಾಲೆಯನ್ನು ಬಿಟ್ಟು ದುಡಿಮೆಗೆ ಮುಂದಾಗುತ್ತಾರೆ. ಇದನ್ನು ತಪ್ಪಿಸಬೇಕಿದೆ ಎಂದರು.

ಸಮಾಜದಲ್ಲಿ ಈ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಪೋಷಕರುಗಳಿಗೆ ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುವುದರ ಜೊತೆಗೆ 14 ವರ್ಷ ದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಶಾಲೆಗೆ ಹೋಗುವುದನ್ನು ತಪ್ಪಿಸಬಾರದು. ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಬಾಲ ಕಾರ್ಮಿಕ ವೃತ್ತಿಯಲ್ಲಿ ತೊಡಗಿಸಿಕೊಂಡ ಯಾವುದೇ ಒಬ್ಬ ವ್ಯಾಪಾರಿ ಅಥವಾ ಉದ್ಯಮಿ ವಿರುದ್ಧ ಕಾನೂನಿನ ಅನ್ವಯ ತಪ್ಪದೇ ಪ್ರಕರಣ ದಾಖಲಿಸಿ, ಅವರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದ ಅವರು, ಕೆಲವು ಮಕ್ಕಳು ಹೆಚ್ಚು ಕಾಲ ದುಡಿಸಿಕೊಳ್ಳಬೇಕೆಂಬ ಮನೋಭಾವದಿಂದ ವೃತ್ತಿಗೆ ಸೇರಿಸಿಕೊಳ್ಳುತ್ತಾರೆ. ಅವರಿಗೆ ಕಾನೂನಿನ ಭಯವೇ ಇರುವುದಿಲ್ಲ. ಇಂತಹವರ ವಿರುದ್ಧ ಪ್ರಕರಣ ದಾಖಲಿಸುವುದರ ಜೊತೆಗೆ ಅವರುಗಳ ಪರವಾನಿಗೆಯನ್ನು ಸ್ಥಳೀಯ ಸಂಸ್ಥೆಗಳು ರದ್ದುಗೊಳಿಸಬೇಕು ಎಂದು ಸೂಚನೆ ನೀಡಿದರು.

ಶಾಲೆಗೆ ಹೋಗದೇ ಕೆಲವು ಮಕ್ಕಳು ಪೋಷಕರ ಜೊತೆಯಲ್ಲಿ ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಬೆಳಗ್ಗಿನಿಂದ ಸಂಜೆಯವರೆಗೆ ಕಾಲ ಕಳೆಯುತ್ತಾರೆ. ಅಂಥವರು ಕಂಡು ಬಂದಲ್ಲಿ ಪೋಷಕರಿಗೆ ಮಕ್ಕಳನ್ನು ಶಾಲೆಗೆ ಸೇರಿಸಲು ತಿಳಿ ಹೇಳಬೇಕು. ಕಳೆದ ಒಂದು ವರ್ಷದಲ್ಲಿ 111 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇವರಲ್ಲಿ ಕೆಲವರು ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬಂದವರಾಗಿದ್ದು, ಇವರುಗಳು ಶಾಲೆಗೆ ಹೋಗುವಂತೆ ನಿಗಾ ವಹಿಸಬೇಕು.

ಇದನ್ನು ಓದಿದ್ದೀರಾ? ದಾವಣಗೆರೆ | ವಿಚಿತ್ರ ಪ್ರಕರಣ: ತಾನೇ ಕಳವು ಮಾಡಿ ದೂರು ನೀಡಿದ್ದ ಯುವತಿ ಈಗ ಪೊಲೀಸರ ಅತಿಥಿ!

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮ್ಮದ್, ಪೌರಾಯುಕ್ತ ರಾಯಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಬಾಲಕಾರ್ಮಿಕ ಯೋಜನ ಸಂಘದ ನಿರ್ದೇಶಕಿ ಅಮೃತ, ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X