ರಸ್ತೆ ಬದಿ ಕೆಟ್ಟು ನಿಂತ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಾವನಪ್ಪಿದ ಮೂವರು ಯುವಕರು ಹಲಕರ್ಟಿ ಗ್ರಾಮದ ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ಪಾಂಡು ರಾಠೋಡ್ (20), ರೋಹಿತ್ ಮೋಹನ್ ಚವ್ಹಾಣ (18) ಕೃಷ್ಣ ಯೆಂಕಪ್ಪ ಬಳ್ವಡಗಿ (21) ಎಂದು ಗುರುತಿಸಲಾಗಿದೆ
ಭೀಕರ ಅಪಘಾತದ ರಭಸಕ್ಕೆ ಓರ್ವ ಯುವಕ ಸ್ಥಳದಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಯುವಕರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಲಾಡ್ಲಾಪುರ ಗ್ರಾಮದಿಂದ ಸ್ವಗ್ರಾಮ ತಾಂಡಾಕ್ಕೆ ತೆರಳುವ ವೇಳೆ ಈ ದುರ್ಘಟನೆ ಜರುಗಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಆಯ್ಕೆಗೆ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ
ಸ್ಥಳಕ್ಕೆ ಡಿವೈಎಸ್‌ಪಿ ಶಂಕರ ಗೌಡ್ ಪಾಟೀಲ್, ವಾಡಿ ಪೊಲೀಸ್ ಠಾಣೆ ಪಿಎಸ್‌ಐ ತಿರುಮಲೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.