ವಾಲ್ಮೀಕಿ ನಿಗಮ ಅಕ್ರಮ | ಕೋರ್ಟ್​​ಗೆ ತನಿಖಾ ವರದಿ ಸಲ್ಲಿಕೆ, ನಾಗೇಂದ್ರ ಹಗರಣದ ರೂವಾರಿ: ಇ.ಡಿ

Date:

Advertisements

ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ್ದ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶಾನಾಲಯ (ಇ.ಡಿ) ಬುಧವಾರ ವರದಿ ಸಲ್ಲಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಇ.ಡಿ ಮಾಹಿತಿ ಹಂಚಿಕೊಂಡಿದ್ದು, ಇ.ಡಿ ಸಲ್ಲಿಸಿರುವ ವರದಿಯನ್ನು ವಿಶೇಷ ಕೋರ್ಟ್​ ಪಡೆದುಕೊಂಡಿದೆ.

ಕರ್ನಾಟಕ ಸರಕಾರದ ಸಂಸ್ಥೆಯಾದ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಸೂತ್ರದಾರಿ ಎಂದು ಹೇಳಿರುವ ಜಾರಿ ನಿರ್ದೇಶನಾಲಯ ಈ ಸಂಸ್ಥೆಯಿಂದ ನೂರಾರು ಕೋಟಿ ರೂಪಾಯಿಗಳನ್ನು ಈ ವರ್ಷದ ಆರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರ ಪರವಾಗಿ ವರ್ಗಾಯಿಸಲಾಗಿದೆ ಎಂದು ಆರೋಪಿಸಿದೆ.

Advertisements

ಈ ಪ್ರಕರಣದ ಸಂಬಂಧ ಈ ಹಿಂದೆಯೆ ಬೆಂಗಳೂರಿನ ಅಕ್ರಮ ಹಣ ವರ್ಗಾವಣೆ ತಡೆ ನ್ಯಾಯಾಲಯದೆದುರು ಪ್ರಾಸಿಕ್ಯೂಟ್ ದೂರು ಅಥವಾ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಇ.ಡಿ ಹೇಳಿದೆ. ಈ ಆರೋಪ ಪಟ್ಟಿಯನ್ನು ನ್ಯಾಯಾಲಯವು ಗಮನಕ್ಕೆ ತೆಗೆದುಕೊಂಡಿದೆ ಎಂದೂ ಅದು ತಿಳಿಸಿದೆ.

ಶಾಸಕ ಹಾಗೂ ಪರಿಶಿಷ್ಟ ಪಂಗಡಗಳ ವ್ಯವಹಾರ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. ಸತ್ಯನಾರಾಯಣ ವರ್ಮ, ಎಟಕಾರಿ ಸತ್ಯನಾರಾಯಣ, ಜೆ.ಜಿ.ಪದ್ಮನಾಭ, ನಾಗೇಶ್ವರ್ ರಾವ್, ನೆಕ್ಕಂಟಿ ನಾಗರಾಜ್ ಹಾಗೂ ವಿಜಯ್ ಕುಮಾರ್ ಗೌಡ ಅವರ ನೆರವಿನೊಂದಿಗೆ ಈ ಹಗರಣವನ್ನು ಎಸಗಲಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ಜಾರಿ ನಿರ್ದೇಶನಾಲಯ ಹೇಳಿದೆ.

ಈ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ ನಾಗೇಂದ್ರರನ್ನು ಈಗಾಗಲೇ ಬಂಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X