ಖ್ಯಾತ ಉದ್ಯಮಿ ರತನ್‌ ಟಾಟಾ ನಿಧನ: ಗಣ್ಯರು, ಅಭಿಮಾನಿಗಳಿಂದ ಕಂಬನಿ

Date:

Advertisements

ದೇಶದ ಕೈಗಾರಿಕಾ ಉದ್ಯಮಕ್ಕೆ ಹೊಸ ಅಲೆಯನ್ನು ಸೃಷ್ಟಿಸಿದ್ದ ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ ಇಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಟಾಟಾ ಸಮೂಹ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ತಮ್ಮ ಆರೋಗ್ಯ ಸ್ಥಿತಿ ಕುರಿತಂತೆ ಎರಡು ದಿನದ ಹಿಂದಷ್ಟೇ ವದಂತಿ ಹಬ್ಬಿದಾಗ ‘ನಾನು ಆರೋಗ್ಯ ವಾಗಿದ್ದೇನೆ’ ಎಂದು ಸ್ವತಃ ಸ್ಪಷ್ಟನೆ ನೀಡಿದ್ದರು.

ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಮತ್ತೆ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಮುಂಬೈನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರು 11.30 ಗಂಟೆಗೆ ಅವರು ಮೃತಪಟ್ಟರು.

Advertisements

‘ರತನ್‌ ಟಾಟಾ ಅವರು ಇನ್ನಿಲ್ಲ’ ಎಂದು ಟಾಟಾ ಸನ್ಸ್ ಸಂಸ್ಥೆಯ ಅಧ್ಯಕ್ಷ ಎನ್‌.ಚಂದ್ರಶೇಖರನ್ ರಾತ್ರಿ ಹೇಳಿಕೆ ಬಿಡುಗಡೆ ಮಾಡಿದ್ದು, ‘ರತನ್ ಟಾಟಾ ಅವರು ನನಗೆ ಸ್ನೇಹಿತ, ಗುರು ಮತ್ತು ಮಾರ್ಗದರ್ಶಿ’ ಎಂದೂ ಸ್ಮರಿಸಿದ್ದಾರೆ.

‘ರತನ್‌ ನೇವಲ್‌ ಟಾಟಾ ಅವರು ನಿಧನರಾಗಿದ್ದಾರೆ. ಅವರು ನೀಡಿದ ಅಪಾರ ಕೊಡುಗೆಗಳು ಟಾಟಾ ಸಮೂಹ ವನ್ನಷ್ಟೇ ಅಲ್ಲದೆ ರಾಷ್ಟ್ರವನ್ನು ರೂಪಿಸಿವೆ’ ಎಂದ ಟಾಟಾ ಸನ್ಸ್‌ ಅಧ್ಯಕ್ಷ ಎನ್‌.ಚಂದ್ರಶೇಖರನ್‌ ಹೇಳಿದ್ದಾರೆ. ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಉದ್ಯಮಿ ಹರೀಶ್‌ ಗೋಯೆಂಕಾ, ರತನ್ ಟಾಟಾ ಅವರನ್ನು ದಿಗ್ಗಜ ಎಂದು ಬಣ್ಣಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಮ್ಮು- ಕಾಶ್ಮೀರ ; ಚುನಾಯಿತ ಸರ್ಕಾರ ಬಂದರೂ ಉಪರಾಜ್ಯಪಾಲರೇ ಸರ್ವಾಧಿಕಾರಿ!

ಎರಡು ದಿನದ ಹಿಂದೆಯಷ್ಟೇ ಅನಾರೋಗ್ಯ ಕುರಿತ ವದಂತಿಗಳ ನಡುವೆ, ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಲು ಟಾಟಾ ಅವರು ಸಹಿ ಮಾಡಿದ ಹೇಳಿಕೆಯನ್ನು ‘ಎಕ್ಸ್‌’ ಮತ್ತು ‘ಇನ್‌ಸ್ಟಾಗ್ರಾಮ್‌’ನಲ್ಲಿ ಬಿಡುಗಡೆ ಮಾಡಲಾಗಿತ್ತು. ರತನ್‌ ಟಾಟಾ ಅವರ ಅಗಲಿಗೆ ಹಲವು ಪ್ರಮುಖರು ಸಂತಾಪ ನುಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಹಾಗೂ ಹಲವು ಉದ್ಯಮ ಕ್ಷೇತ್ರದ ಹಲವು ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಮಾರು 20 ವರ್ಷ ಕಾಲ ಟಾಟಾ ಸನ್ಸ್ ಸಂಸ್ಥೆಯನ್ನು ಮುನ್ನಡೆಸಿದ್ದರು. ಅಲ್ಲದೆ, ದೇಶದ ಉದ್ಬಮದ ವಿವಿಧ ಕ್ಷೇತ್ರಗಳಲ್ಲಿ ಕಂಪನಿಯ ಬಾಹುವನಿನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಸಂಖ್ಯ ಸಿಬ್ಬಂದಿಗೆ ಪ್ರೇರಕಶಕ್ತಿಯಾಗಿದ್ದರು. ದೇಶಿ ಉತ್ಪಾದನೆಗೆ ಮೆರಗು, ಖ್ಯಾತಿಯನ್ನು ನೀಡಿದ್ದರು.

ದೊಡ್ಡ ಸಂಸ್ಥೆಯ ಸ್ಥಾಪಕರಾಗಿ ನಮ್ರತೆ, ಸರಳತೆಯಿಂದಾಗಿಯೂ ಅವರು ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿದ್ದರು. ಟಾಟಾ ಸಂಸ್ಥೆ ಇಂದು ವಿಶ್ವದ ಅತಿದೊಡ್ಡ ಸಂಸ್ಥೆಗಳಲ್ಲಿ ಒಂದಾಗಿ ಖ್ಯಾತಿ ಪಡೆದಿದೆ. 2023–24ನೇ ಹಣಕಾಸು ವರ್ಷದಲ್ಲಿ ಸಮೂಹ ಸಂಸ್ಥೆಗಳ ಒಟ್ಟು ವರಮಾನ 165 ಬಿಲಿಯನ್ ಡಾಲರ್‌ಗಳು.

ಇಂದು ಅಪರಾಹ್ನದವರೆಗೆ ಮುಂಬೈಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ

ಟಾಟಾ ಗ್ರೂಪ್‌ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನಿನ್ನೆ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.

ರತನ್ ಟಾಟಾ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ಇಂದು ಒಂದು ದಿನದ ಶೋಕಾಚರಣೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3.30ರವರೆಗೆ ಮುಂಬೈಯ ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (NCPA) ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಎಲ್ಲ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಂಬೈ ದಕ್ಷಿಣ ವಲಯ ಹೆಚ್ಚುವರಿ ಆಯುಕ್ತ ಅಭಿನವ್ ದೇಶ್ ಮುಖ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X