4 ಸಾವಿರ ಕೋಟಿ ರೂ. ಉದ್ಯಮವನ್ನು 8 ಲಕ್ಷ ಕೋಟಿ ರೂ.ಗಳಿಗೆ ವಿಸ್ತರಿಸಿದ್ದ ರತನ್‌ ಟಾಟಾ

Date:

Advertisements

ಖ್ಯಾತ ಉದ್ಯಮಿ ಹಾಗೂ ಕೋಟ್ಯಂತರ ಭಾರತೀಯರು ಗೌರವದಿಂದ ಕಾಣುತ್ತಿದ್ದ ರತನ್ ಟಾಟಾ ಅವರು ಟಾಟಾ ಸಮೂಹ ಸಂಸ್ಥೆಯನ್ನು 1991ರಿಂದ 2012ರವರೆಗೆ ಮುನ್ನಡೆಸಿದ್ದರು. ಅಸಲಿಗೆ, ಅವರಿಗೆ 35 ವರ್ಷ ವಯಸ್ಸಾಗಿದ್ದಾಗಲೇ ಕಂಪನಿಯಲ್ಲಿ ಕೆಲವು ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದರು.

ಆಡಳಿತ ಚುಕ್ಕಾಣಿಯನ್ನು ಹಿಡಿದಿದ್ದು 1991ರಲ್ಲಿ. ಕಂಪನಿಯ ಆಡಳಿತವನ್ನು ಹಿಡಿಯುವ ಹೊತ್ತಿಗೆ ಕಂಪನಿಯ ಕೆಲವಾರು ಹುದ್ದೆಗಳಲ್ಲಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿ, ಕಂಪನಿಯ ಆಳ, ಅಗಲ, ವ್ಯವಹಾರಗಳ ಆಮೂಲಾಗ್ರ ವಿಚಾರಗಳನ್ನು ತಿಳಿದುಕೊಂಡಿದ್ದ ಟಾಟಾ, ತಮ್ಮ ವಂಶಜರು ಕಟ್ಟಿದ ಸಾಮ್ರಾಜ್ಯವನ್ನು ಮತ್ತಷ್ಟು ದೊಡ್ಡದಾಗಿ ಬೆಳೆಸುವ ಛಲ ಹೊಂದಿದ್ದರು. ಅವರ ಆ ಪ್ರಯತ್ನದ ಫಲವಾಗಿ, 4 ಸಾವಿರ ಕೋಟಿ ರೂ. ಮೌಲ್ಯದಿಂದ 8 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಿದರು.

ಈ ಸುದ್ದಿ ಓದಿದ್ದೀರಾ? ಖ್ಯಾತ ಉದ್ಯಮಿ ರತನ್‌ ಟಾಟಾ ನಿಧನ

Advertisements

ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದಿದ್ದರು. ಅಷ್ಟಲ್ಲದೆ ಹುಟ್ಟು ಶ್ರೀಮಂತನಾಗಿದ್ದರೂ ಸರಳತೆ, ಸಹಾನುಭೂತಿಯ ನಡವಳಿಕೆಯಿಂದ ಹೆಸರುವಾಸಿಯಾಗಿದ್ದರು. ದೇಶದ ಆರ್ಥಿಕತೆ ಮತ್ತು ವ್ಯಾಪಾರಕ್ಕೆ ಅಪಾರ ಕೊಡುಗೆಗಳನ್ನು ರತನ್‌ ಟಾಟಾ ನೀಡಿದ್ದಾರೆ.

ರಾಷ್ಟ್ರ ನಿರ್ಮಾಣದಲ್ಲಿ ಮಹಾನ್ ಹೆಜ್ಜೆಗುರುತುಗಳನ್ನು ಅವರು ಉಳಿಸಿದ್ದಾರೆ. 1991ರಲ್ಲಿ ಟಾಟಾ ಸನ್ಸ್‌ನ ಚೇರ್ಮನ್‌ ಆಗಿದ್ದ ರತನ್‌ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮುತ್ತಜ್ಜ ಸ್ಥಾಪನೆ ಮಾಡಿದ್ದ ಸಂಸ್ಥೆಯನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು. 1996ರಲ್ಲಿ ಟಾಟಾ ಟೆಲಿಸರ್ವೀಸಸ್‌ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X