ಜನರು ಸ್ವಂತ ಮನೆ ಕಟ್ಟಲು ವರ್ಷಗಟ್ಟಲೇ ಬಿಬಿಎಂಪಿ, ಬಿಡಿಎಗೆ ಅಲೆಯಬೇಕಿದೆ: ಆರ್‌ ಅಶೋಕ್‌

Date:

Advertisements

ಸಾರ್ವಜನಿಕರು ತಮ್ಮ ಸ್ವಂತ ನಿವೇಶನದಲ್ಲಿ ತಮ್ಮ ಸ್ವಂತ ದುಡ್ಡಿನಲ್ಲಿ ಮನೆ ಕಟ್ಟಿಸಬೇಕಾದರೂ ವರ್ಷಗಟ್ಟಲೇ ಬಿಬಿಎಂಪಿ, ಬಿಡಿಎ ಕಚೇರಿಗಳಿಗೆ ಅಲೆದಾಟ ನಡೆಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

“ಕಾಂಗ್ರೆಸ್‌ನ ತುಘಲಕ್ ಸರ್ಕಾರದ ಆಡಳಿತದಲ್ಲಿ ಸಚಿವರಿಗೆ ಅಧಿಕಾರಿಗಳ ಮೇಲೆ ಹಿಡಿತವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದಂತಾಗಿದೆ” ಎಂದು ಎಕ್ಸ್‌ ತಾಣದಲ್ಲಿ ಬರೆದಿದ್ದಾರೆ.

“ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಸಾವಿರ ಚದರ ಅಡಿ (50X80) ವಿಸ್ತೀರ್ಣದ ವರೆಗಿನ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಆನ್‌ಲೈನ್‌ ಮೂಲಕ ನಕ್ಷೆ ಮಂಜೂರಾತಿಗೆ ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಬಿಟ್ಟಿ ಪ್ರಚಾರ ಪಡೆದುಕೊಂಡ ಕಾಂಗ್ರೆಸ್‌ ಸರ್ಕಾರ, ಈಗ ಏಕಾಏಕಿ ನಿಯಮ ಬದಲಾವಣೆ ಮಾಡಿ ಬಿಡಿಎ ಬಡಾವಣೆಗಳಲ್ಲಿರುವ ನಿವೇಶನಗಳಿಗೆ ಬಿಡಿಎ ಬಳಿಯೇ ನಕ್ಷೆ ಅನುಮತಿ ಪಡೆಯಬೇಕು ಎಂಬ ಆದೇಶ ಹೊರಡಿಸಿದೆ” ಎಂದು ಕಿಡಿಕಾರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಮ್ಮು- ಕಾಶ್ಮೀರ ; ಚುನಾಯಿತ ಸರ್ಕಾರ ಬಂದರೂ ಉಪರಾಜ್ಯಪಾಲರೇ ಸರ್ವಾಧಿಕಾರಿ!

“ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ ತಾವು ನಂಬಿಕೆ ನಕ್ಷೆ ಯೋಜನೆ ಜಾರಿ ಮಾಡುವಾಗ ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲವೇ? ಬಿಬಿಎಂಪಿ ಮತ್ತು ಬಿಡಿಎ ನಡುವೆ ತಾಳಮೇಳವಿಲ್ಲದೆ ನಿಯಮಗಳನ್ನು ಮನಬಂದಂತೆ ಬದಲಾಯಿಸಿದರೆ ಸಾರ್ವಜನಿಕರಿಗೆ ತೊಂದರೆ ಆಗುವುದಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಪುಣ್ಯಾತ್ಮ ನೀವು ಅಧಿಕಾರದಲ್ಲಿ ಇದ್ದಾಗ ಹೇತು ತಿಪ್ಪೆ ಸಾರಿಸಿ ರಂಗೋಲಿ ಹಾಕಿ ಹೋದಿರಿ,,ಇವರೂ ಈಗ ಅದನ್ನೇ ಮಾಡುತ್ತಿದ್ದಾರೆ,, ಎಲ್ಲರೂ ತುಡುಗರೆ ಜನರು ನಿಮ್ಮನ್ನು ಬೀದಿಯಲ್ಲಿ ಅಟ್ಟಾಡಿಸುವವರೆಗೂ ನಿಮ್ಮಗಳ ಮಂಗನಾಟ ಇಷ್ಟೇ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X