ಧಾರವಾಡ | ಅ. 13ಕ್ಕೆ ರಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ: ಸಿಎಂ ಸೇರಿ ಹಲವರು ಭಾಗಿ

Date:

Advertisements

ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಒಂದಾದ ಧಾರವಾಡದ ಪ್ರತಿಷ್ಠಿತ ರಡ್ಡಿ ಸಹಕಾರ ಬ್ಯಾಂಕ್ ಅಕ್ಟೋಬರ್ 13‍ರಂದು ಶತಮಾನೋತ್ಸವ ಸಂಭ್ರಮ ಆಚರಿಸುತ್ತಿದೆ. ಬ್ಯಾಂಕ್ ಶತಮಾನೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಚಿವರ ದಂಡು ಬರಲಿದೆ ಎಂದು ಬ್ಯಾಂಕ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

ಬ್ಯಾಂಕಿನ ಕೆ.ಎಲ್. ಪಾಟೀಲ್ ಹಾಗೂ ಬ್ಯಾಂಕಿನ ನಿರ್ದೇಶಕರು, ಶಾಸಕ ಎನ್.ಎಚ್. ಕೋನರಡ್ಡಿ ಶತಮಾನೋತ್ಸವ ಸಂಭ್ರಮದ ವಿವರಗಳನ್ನು ಧಾರವಾಡದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು ನೀಡಿದರು.

1914 ರಲ್ಲಿ  ಎಫ್.ಟಿ. ನಲವಡಿ ಹಾಗೂ ಸಮಾಜದ ಧುರೀಣರಿಂದ ಆರಂಭವಾದ ಬ್ಯಾಂಕು ಇಂದು ಹೆಮ್ಮರವಾಗಿ ಬೆಳೆದಿದೆ. ಸಹಕಾರ ರಂಗದ ಭೀಷ್ಮ ಕೆ. ಎಚ್. ಪಾಟೀಲರು ಹಾಗೂ ಹಿರಿಯರು ಬ್ಯಾಂಕಿಗೆ ಬಲ ತುಂಬಿದರು. ಈಗ ಬ್ಯಾಂಕಿನ ಪ್ರೇರಕ ಶಕ್ತಿಯಾಗಿ ಬ್ಯಾಂಕಿನ ನಿರ್ದೇಶಕರು ಹಾಗೂ ಕರ್ನಾಟಕ ಸರ್ಕಾರದ ಹಿರಿಯ ಸಚಿವರಾದ ಎಚ್‌.ಕೆ. ಪಾಟೀಲರು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

Advertisements

ರವಿವಾರ ಸಾಯಂಕಾಲ 4-00 ಗಂಟೆಗೆ ಬ್ಯಾಂಕಿನ ಪ್ರಧಾನ ಕಛೇರಿಯ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ನಂತರ ಬ್ಯಾಂಕಿನ ಸಂಸ್ಥಾಪಕ  ಎಫ್.ಟಿ. ನಲವಡಿ ಮತ್ತು ಬ್ಯಾಂಕಿನ ಅಭಿವೃದ್ಧಿ ಹರಿಕಾರ ಮತ್ತು ಸಹಕಾರ ರಂಗದ ಭೀಷ್ಮ ಕೆ.ಎಚ್. ಪಾಟೀಲರ ಪುತ್ಥಳಿಗಳ ಅನಾವರಣ ಮಾಡುವರು.

ಸತ್ತೂರಿನ  ಡಿ. ವೀರೇಂದ್ರ ಹೆಗಡೆ ಕಲಾಕ್ಷೇತ್ರದಲ್ಲಿ ನಡೆಯುವ ಶತಮಾನೋತ್ಸವ ಸಮಾರಂಭವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಉದ್ಘಾಟಿಸುವರು. ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಕೆ.ಎಚ್‌. ಪಾಟೀಲ್ ವಿಚಾರಧಾರೆ ಪುಸ್ತಕ ಬಿಡುಗಡೆ ಮಾಡುವರು. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ ಜೋಶಿ ಮಹಾಯೋಗಿ ವೇಮನ ಭಾವಚಿತ್ರ ಅನಾವರಣ ಮಾಡುವರು. ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸಚಿವ ರಾಮಲಿಂಗಾರಡ್ಡಿ, ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರ ಅನಾವರಣ ಮಾಡುವರು ಎಂದು ತಿಳಿಸಿದ್ದಾರೆ.

ಕಾರ್ಮಿಕ, ಮಾಹಿತಿ ಮತ್ತು ಮೂಲ ಸೌಕರ್ಯ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ, ಹೊಸದಿಲ್ಲಿಯ ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಅಧ್ಯಕ್ಷ ಲಕ್ಷ್ಮೀದಾಸ, ಹೊಸದಿಲ್ಲಿಯ ಅಂಬ್ರೆಲಾ ಸಂಘಟನೆಯ (ಎನ್.ಯು.ಸಿ.ಎಫ್.ಡಿ.ಸಿ.) ಚೇರಮನ್‌  ಜ್ಯೋತೀಂದ್ರಭಾಯಿ ಮೆಹ್ರಾ ಭಾಗವಹಿಸಲಿದ್ದಾರೆ.

ಎರೆಹೊಸಳ್ಳಿಯ ಮಹಾಯೋಗಿ ವೇಮನ ಸಂಸ್ಥಾನ ಮಠದ ವೇಮನಾನಂದ ಸ್ವಾಮಿಗಳು, ಧಾರವಾಡದ ಮುರಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮಿಜಿಗಳ ಸಾನಿಧ್ಯದಲ್ಲಿ ಜರುಗುವ ಈ ಸಮಾರಂಭದ ಅಧ್ಯಕ್ಷತೆಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ, ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾ ಮಂಡಳದ ಅಧ್ಯಕ್ಷ ಮತ್ತು ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಚೇರಮನ್ ಎಮಿರೇಟ್ಸ್  ಎಚ್. ಕೆ. ಪಾಟೀಲ್ ವಹಿಸುವರು ಎಂದು ರಡ್ಡಿ ಬ್ಯಾಂಕಿನ ಚೇರ್‌ಮೆನ್‌ ಕೆ. ಎಲ್. ಪಾಟೀಲರು ಹೇಳಿದರು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್,  ಬಸವರಾಜ ಬೊಮ್ಮಾಯಿ, ವಿಧಾನಸಭೆಯ ಉಪಸಭಾಧ್ಯಕ್ಷ  ರುದ್ರಪ್ಪ ಲಮಾಣಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಲೋಕಸಭೆ ಸದಸ್ಯ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದರು.

ಶಾಸಕ ಹಾಗೂ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ. ಎಸ್‌. ಪಾಟೀಲ, ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್‌ ಅಧ್ಯಕ್ಷ ಶಾಸಕ  ಸಿ.ಎಸ್‌. ನಾಡಗೌಡ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಹಾಗೂ ಶಾಸಕ ಜೆ. ಟಿ. ಪಾಟೀಲ, ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ವಿನಯ ಕುಲಕರ್ಣಿ, ಕರ್ನಾಟಕ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ  ಪ್ರಸಾದ ಅಬ್ಬಯ್ಯ, ಮಾಜಿ ವಿಧಾನ ಸಭಾಧ್ಯಕ್ಷ ಕೆ. ಬಿ. ಕೋಳಿವಾಡ, ಮಾಜಿ ಸಚಿವ ಹಾಗೂ ನ್ಯಾಫಕಬ್ ನಿರ್ದೇಶಕ ಎ. ಎಮ್. ಹಿಂಡಸಗೇರಿ,  ಸಿದ್ಧಾರೂಡ ಮಠದ ಪೋಷಕ, ಅಜೀವ ಸದಸ್ಯ, ಮೇಲ್ಮನೆಯ ಅಧ್ಯಕ್ಷ, ಮಾಜಿ ಶಾಸಕ ಡಿ.ಆರ್. ಪಾಟೀಲ್, ಮಾಜಿ ಸಚಿವ ಬಿ.ಆರ್. ಯಾವಗಲ್, ಶಾಸಕ ಎನ್. ಎಚ್. ಕೋನರಡ್ಡಿ, ಮಾಜಿ ಸಚಿವ  ಎಸ್.ಆರ್. ಪಾಟೀಲ್, ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಸರ್ಕಾರದ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಅಜಯ ನಾಗಭೂಷಣ ಹಾಗೂ ಭಾರತೀಯ ಭೂ ಸೇನೆಯ ಲೆ ಜನರಲ್ ರಮೇಶ ಹಲಗಲಿ ಆಗಮಿಸಲಿದ್ದಾರೆ.

ಶಾಸಕ ಪಿ.ಎಚ್, ಪೂಚಾರ, ಹಂಪನಗೌಡ ಬಾದರ್ಲಿ, ಮಹೇಶ ಟೆಂಗಿನಕಾಯಿ, ಪ್ರಕಾಶ ಕೋಳಿವಾಡ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರ ರಾಮಪ್ಪ ಬಡಿಗೇರ, ಶಾಸಕ ಚನ್ನಾರಡ್ಡಿ ತುನ್ನೂರ, ಮಾಜಿ ಸಚಿವ ಎನ್. ಎಚ್. ಶಿವಶಂಕರ ರಡ್ಡಿ,  ಅಮೇರಗೌಡ ಬಯ್ಯಾಪುರ, ಮಾಜಿ ಶಾಸಕ ಎಸ್. ಜಿ. ನಂಜಯ್ಯನಮಠ, ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಅನ್ವರಿ, ಶಾಸಕರಾದ ಸುಬ್ಬಾರೆಡ್ಡಿ, ಮಾಜಿ ಸಚಿವರಾದ ಹಾಲಪ್ಪ ಆಚಾರ, ವಂಕಟರಾವ ನಾಡಗೌಡ, ಮಾಜಿ ಶಾಸಕ ಸಿ.ಆರ್. ಸೊರಗಾವಿ, ಎನ್. ಶರಣಪ್ಪ ಮಟ್ಟೂರ, ಜಿ.ಎಚ್. ತಿಪ್ಪಾರಡ್ಡಿ, ಆರ್ .ವಿ. ಪಾಟೀಲ, ಸೋಮನಗೌಡ ಪಾಟೀಲ, ಎ.ಎಸ್‌. ಪಾಟೀಲ ನಡಹಳ್ಳಿ, ಬಸವರಾಜ ಪಾಟೀಲ (ಇಟಗಿ) ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸಹಕಾರ ಸಂಘಗಳ ನಿಬಂಧಕ ಟಿ.ಎಚ್‌.ಎಮ್. ಕುಮಾರ, ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಮಾಜಿ ಅಧ್ಯಕ್ಷ ಡಿ.ಟಿ. ಪಾಟೀಲ, ರಾಜ್ಯ ಪಟ್ಟಣ ಸಹಕಾರಿ ಬ್ಯಾಂಕುಗಳ ಮಹಾಮಂಡಳದ ಉಪಾಧ್ಯಕ್ಷ ಬಿ.ಎಸ್. ಪರಮಶಿವಯ್ಯ, ನ್ಯಾಫ್‌ ಕಬ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಕೃಷ್ಣ, ನ್ಯಾಫ್‌ಕಬ್ ನಿರ್ದೇಶಕರಾದ ಜಯಕುಮಾರ, ಕೆ. ಕಾಳಪ್ಪ, ಸಹಕಾರ ಸಂಘಗಳ ಜಂಟಿ ನಿಬಂಧಕ ಸುರೇಶಗೌಡ, ಪಿ. ಮಹೇಶ, ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಂಡಲೀಕ ಎನ್. ಕೆರೂರೆ, ಸಹಕಾರ ಸಂಘಗಳ ಉಪನಿಬಂಧಕ ರಮೇಶ ಬಗಲಿ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ  ನಿಂಗರಾಜ ಬೆಣ್ಣಿ ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರತನ್ ಟಾಟಾ | ಬಂಡವಾಳಶಾಹಿಗಳ ರತ್ನ – ಸಮಾಜವಾದಿ ಆಶಯಗಳ ದುಸ್ವಪ್ನ?

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಕೆ.ಬಿ. ನಾಯಿಕ, ನಿರ್ದೇಶಕ ವಕೀಲ ವೈ.ಡಿ. ಕಾಮರಡ್ಡಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ಬ್ಯಾಂಕಿನ ನಿರ್ದೇಶಕ ಎ.ಜಿ. ಮುಳ್ಳೂರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ  ವಿ. ಆರ್. ನಾಗಾವಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X