ಕಾಂಗ್ರೆಸ್ ವಿರುದ್ಧ ಆಧಾರರಹಿತ ಜಾಹೀರಾತು; ಬಿಜೆಪಿಗೆ ಚು. ಆಯೋಗ ನೋಟಿಸ್

Date:

Advertisements

ಕಾಂಗ್ರೆಸ್ಅನ್ನು ‘ವಿಶ್ವದ ಅತ್ಯಂತ ಭ್ರಷ್ಟ ಪಕ್ಷ’ ಎಂದು ಬಣ್ಣಿಸಿ ಪತ್ರಿಕೆಗಳಿಗೆ ಜಾಹೀರಾತು ನೀಡಿರುವ ಬಿಜೆಪಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ‘ತಾನು ಮಾಡಿರುವ ಆರೋಪಗಳನ್ನು ಸಾಬೀತುಪಡಿಸುವ ಪರಿಷ್ಕೃತ ಸಾಕ್ಷ್ಯ ಗಳನ್ನು ಒದಗಿಸಬೇಕು’ ಎಂದು ಬಿಜೆಪಿಗೆ ಸೂಚನೆ ನೀಡಿದೆ.

ಈ ಹಿಂದೆ, ‘ಭ್ರಷ್ಟಾಚಾರ ದರ ಕಾರ್ಡ್‌’ಗೆ ಸಂಬಂಧಿಸಿದಂತೆ ಬಿಜೆಪಿಯೂ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಆಗಲೂ, ಕಾಂಗ್ರೆಸ್‌ಗೆ ಆಯೋಗ ನೋಟಿಸ್ ನೀಡಿತ್ತು.

ಈಗ, ಕಾಂಗ್ರೆಸ್‌ ವಿರುದ್ಧ ಬಿಜೆಪಿಯೂ ‘ಭ್ರಷ್ಟಾಚಾರ‘ಕ್ಕೆ ಸಂಬಂಧಿಸಿದಂತೆ ಜಾಹೀರಾತು ನೀಡಿದೆ. ಅದರ ವಿರುದ್ಧ ಕಾಂಗ್ರೆಸ್ ಚುನಾವಣಾ ಸಮಿತಿಯು ದೂರು ನೀಡಿದ್ದು, ಆಯೋಗವು ಕರ್ನಾಟಕ ಬಿಜೆಪಿಗೆ ನೋಟಿಸ್ ನೀಡಿದೆ.

Advertisements

“ಎದುರಾಳಿ ಪಕ್ಷಗಳ ನೀತಿ ಮತ್ತು ಆಡಳಿತದ ಬಗ್ಗೆ ಟೀಕೆ ಮಾಡುವ ಹಕ್ಕು ರಾಜಕೀಯ ನಾಯಕರುಗಳಿಗಿದೆ. ಆದಾಗ್ಯೂ, ಈ ಹಕ್ಕನ್ನು ಚಲಾಯಿಸುವಾಗ, ತಾವು ಮಾತನಾಡುವ ಮತ್ತು ಆರೋಪಿಸುವ ವಿಚಾರಗಳು ಸತ್ಯವೆಂದು ಸಾಬೀತುಪಡಿಸುವಂತಿರಬೇಕು, ಸಾರ್ವಜನಿಕ ಪ್ರವಚನದ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯಬೇಕು, ಮಾದರಿ ಸಂಹಿತೆಯ ವಿವಿಧ ನಿಬಂಧನೆಗಳು ಮತ್ತು ಸಂಬಂಧಿತ ಕಾನೂನುಗಳಿಗೆ ಬದ್ಧವಾಗಿರಬೇಕು” ಎಂದು ನೋಟಿಸ್‌ನಲ್ಲಿ ಹೇಳಿದೆ.

“ಮೇ 9ರ ರಾತ್ರಿ 8 ಗಂಟೆಯೊಳಗೆ ಬಿಜೆಪಿ ನೀಡಿದ ಜಾಹೀರಾತನ್ನು ಸಾಬೀತುಪಡಿಸುವ ಸಾಕ್ಷ್ಯಗಳನ್ನು ವಿವರಣೆಯೊಂದಿಗೆ ಒದಗಿಸಬೇಕು. ಅಲ್ಲದೆ, ಅವುಗಳನ್ನು ಸಾರ್ವಜನಿಕಗೊಳಿಸಬೇಕು” ಎಂದು ನಿರ್ದೇಶಿಸಿದೆ.

ಈ ಸುದ್ದಿ ಓದಿದ್ದೀರಾ?: ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು?: ನೀವಿದ್ದಲ್ಲಿಯೇ ಪರಿಶೀಲಿಸಲು ಇಲ್ಲಿ ನೋಡಿ

“ಯಾವುದೇ ಪುರಾವೆಗಳನ್ನು ಒದಗಿಸದಿದ್ದರೆ, ಎಂಸಿಸಿ (ಮಾದರಿ ನೀತಿ ಸಂಹಿತೆ), ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಕಾನೂನು ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಕಾರಣಗಳನ್ನು ನೀಡಬೇಕು” ಎಂದು ಇಸಿ ಹೇಳಿದೆ.

ಮೇ 10ರಂದು ರಾಜ್ಯ ವಿಧಾನಸಭೆಗೆ ಮತದಾನ ನಡೆಯಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X